ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್ ಮಲ್ಯ
ನವದೆಹಲಿ, ಮೇ, 02: ಸುಸ್ತಿದಾರ ವಿಜಯ್ ಮಲ್ಯ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಗ್ಲೆಂಡಿನಲ್ಲಿರುವ ವಿಜಯ್ ಮಲ್ಯ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸ್ಟೇಟ್ ಬ್ಯಾಂಕ್ ಇಂಡಿಯಾ ಸೇರಿದಂತೆ 17 ಬ್ಯಾಂಕ್ ಗಳಿಂದ 9 ಸಾವಿರ ಕೋಟಿಗೂ ಅಧಿಕ ಸಾಲ ಮಾಡಿಕೊಂಡು ವಿದೇಶಕ್ಕೆ ಹಾರಿದ್ದ ಮಲ್ಯ ತಮ್ಮ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.[ಪಾಸ್ ಪೋರ್ಟ್ ಕಳೆದುಕೊಂಡ ಮಲ್ಯ ಮುಂದಿರುವ ಆಯ್ಕೆಗಳು?]

ಮದ್ಯದ ದೊರೆ ವಿಜಯ್ ಮಲ್ಯ ಅವರ ರಾಜ್ಯಸಭಾ ಸದಸ್ಯತ್ವವನ್ನು ರದ್ದುಗೊಳಿಸಲು ರಾಜ್ಯಸಭಾ ನೀತಿ ಸಮಿತಿ ನಿರ್ಧರಿಸಿತ್ತು. ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲದ ಕಾರಣ ಕ್ರಮ ಜರುಗಿಸಲು ಶಿಫಾರಸು ಮಾಡಲು ಮುಂದಾ ಏಪ್ರಿಲ್ 26 ಮುಂದಾಗಿತ್ತು.[ಮಲ್ಯ ಒಡೆತನದಲ್ಲಿದ್ದ 6 ಕಂಪನಿಗಳ ಸ್ಥಿತಿ ಗತಿ ಏನಾಗಿದೆ?]
ಮನಿ ಲಾಂಡ್ರಿಂಗ್ ಹಾಗೂ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್ ಗೆ ಮಲ್ಯ ಅವರು ಸಮರ್ಪಕ ಉತ್ತರ ನೀಡದ ಕಾರಣ, ಅವರ ಪಾಸ್ ಪೋರ್ಟ್ ಅನ್ನು ಸಹ ವಿದೇಶಾಂಗ ಸಚಿವಾಲಯ ರದ್ದು ಮಾಡಿತ್ತು. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ವಿಜಯ್ ಮಲ್ಯ ಅವರ ಸದಸ್ಯತ್ವದ ಅವಧಿ ಜೂನ್ 30ಕ್ಕೆ ಅಂತ್ಯಗೊಳ್ಳಲಿತ್ತು.












Click it and Unblock the Notifications