ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!: ಭರ್ಜರಿ ಘೋಷಣೆ

ಚೆನ್ನೈ: ತಮಿಳುನಾಡಿನ ಟಿವಿಕೆ ಸರ್ಕಾರವು 2026-27ನೇ ಸಾಲಿನ ಮೊದಲ ಬಜೆಟ್‌ನ್ನು ಮಂಡಿಸಿದ್ದು, ಹಣಕಾಸು ಸಚಿವ ಮಾರಿ ವಿಲ್ಸನ್ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು, ಯುವಜನರು ಹಾಗೂ ಗ್ರಾಮೀಣ ಕುಟುಂಬಗಳ ಕಲ್ಯಾಣಕ್ಕೆ ಆದ್ಯತೆ ನೀಡಿರುವ ಈ ಬಜೆಟ್‌ನಲ್ಲಿ ಹಲವು ವಿಶೇಷ ಘೋಷಣೆಗಳು ಗಮನ ಸೆಳೆದಿವೆ.

ಟಿವಿಕೆ ಸರ್ಕಾರವು 2026-27ನೇ ಸಾಲಿನ ಮೊದಲ ಬಜೆಟ್‌ನಲ್ಲಿ ಅತ್ಯಂತ ಚರ್ಚೆಯಾಗುತ್ತಿರುವ ಯೋಜನೆ ಎಂದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ಮಗುವಿಗೂ 1 ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆ. ಸುರಕ್ಷಿತ ಹೆರಿಗೆಗೆ ಉತ್ತೇಜನ ನೀಡುವುದು ಹಾಗೂ ಸರ್ಕಾರಿ ಆಸ್ಪತ್ರೆಗಳ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

Vijay s Tamil Nadu Budget 2026 Gold Rings for Newborns Silk Sarees Hajj Subsidy amp amp Key Announcements

ಇದರ ಜೊತೆಗೆ, ಮದುವೆಯಾಗುವ ಹೆಣ್ಣುಮಕ್ಕಳಿಗಾಗಿ ವಿಶೇಷ ಕಲ್ಯಾಣ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಯೋಜನೆಯಡಿ,ಪ್ರತಿ ವಧುವಿಗೆ 8 ಗ್ರಾಂ ಚಿನ್ನದ ನಾಣ್ಯ ಹಾಗೂ ಒಂದು ಸೀರೆಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಈ ಯೋಜನೆ ನೆರವಾಗಲಿದೆ ಎಂದು ತಮಿಳುನಾಡಿನ ಟಿವಿಕೆ ಸರ್ಕಾರ ತಿಳಿಸಿದೆ.

ಬಜೆಟ್‌ನಲ್ಲಿ ಟಿವಿಕೆ ಸರ್ಕಾರದ ಪ್ರಮುಖ ಚುನಾವಣಾ ಭರವಸೆಗಳಾದ ಎರಡು ಚಿನ್ನದ ಸಹಾಯಧನ ಯೋಜನೆಗಳಿಗೆ ಒಟ್ಟು 1,300 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಮೀಸಲಿಡಲಾಗಿದೆ. ಇದರಲ್ಲಿ 812 ಕೋಟಿ ರೂಪಾಯಿಯನ್ನು "ಚಿನ್ನದ ನಾಣ್ಯ ಮತ್ತು ರೇಷ್ಮೆ ಸೀರೆ ಯೋಜನೆ"ಗೆ ಮೀಸಲಿಡಲಾಗಿದೆ. ಈ ಯೋಜನೆಯಡಿ ಮದುವೆಯಾಗುವ ಮಹಿಳೆಯರಿಗೆ 8 ಗ್ರಾಂ ಚಿನ್ನದ ನಾಣ್ಯ ಹಾಗೂ ಒಂದು ರೇಷ್ಮೆ ಸೀರೆಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಇನ್ನೂ 560 ಕೋಟಿ ರೂಪಾಯಿಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆಗೆ ಮೀಸಲಿಡಲಾಗಿದೆ.

ಇದಲ್ಲದೆ, "ವೆಟ್ರಿ ಮಡಿಕಣಿನಿ ತಿಟ್ಟಂ" ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು 2,000 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಟಿವಿಕೆ ಸರ್ಕಾರವು ನೀಟ್ (NEET) ಪರೀಕ್ಷೆಯನ್ನು ವಿರೋಧಿಸುವ ತನ್ನ ನಿಲುವನ್ನು ಮತ್ತೊಮ್ಮೆ ಪುನರುಚ್ಚರಿಸಿದೆ. ವೈದ್ಯಕೀಯ ಪ್ರವೇಶಕ್ಕಾಗಿ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹಿಂದಿನಂತೆ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡುವ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು ಎಂದು ಹಣಕಾಸು ಸಚಿವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉಲ್ಲೇಖಿಸಿದ ಹಣಕಾಸು ಸಚಿವರು, ತಮಿಳುನಾಡನ್ನು ಆರ್ಥಿಕ ಸಂಕಷ್ಟದಿಂದ ಹೊರತರಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಇದಕ್ಕೂ ಮೊದಲು ಟಿವಿಕೆ ಸರ್ಕಾರ ಬಿಡುಗಡೆ ಮಾಡಿದ್ದ ಶ್ವೇತಪತ್ರದಲ್ಲಿ ರಾಜ್ಯದ ಒಟ್ಟು ಸಾಲ ಸುಮಾರು 10 ಲಕ್ಷ ಕೋಟಿ ರೂಪಾಯಿ ಎಂದು ಉಲ್ಲೇಖಿಸಲಾಗಿತ್ತು. ಗ್ರಾಮೀಣ ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಅರ್ಹ ಕುಟುಂಬಗಳಿಗೆ ಉಚಿತವಾಗಿ ಐದು ಮೇಕೆಗಳು ಹಾಗೂ ಹಾಲು ನೀಡುವ ಒಂದು ಹಸುವನ್ನು ವಿತರಿಸುವ ಯೋಜನೆಯನ್ನೂ ಪ್ರಕಟಿಸಿದೆ. ಈ ಯೋಜನೆಯಿಂದ ಗ್ರಾಮೀಣ ಕುಟುಂಬಗಳ ಆದಾಯ ಹೆಚ್ಚಿಸಲು ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಗುರಿ ಹೊಂದಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+