Breaking; ಕೋಮು ಗಲಭೆ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ವಜಾ
ನವದೆಹಲಿ, ಏಪ್ರಿಲ್ 26; ಹನುಮ ಜಯಂತಿ ಸಮಯದಲ್ಲಿ ನಡೆದ ಕೋಮು ಗಲಭೆ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಕೀಲರೊಬ್ಬರು ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ರಾಮನವಮಿ, ಹನುಮ ಜಯಂತಿ ಸಂದರ್ಭದಲ್ಲಿ ಗುಜರಾತ್, ನವದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಗಲಭೆ ನಡೆದಿತ್ತು. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿತ್ತು.
ಹನುಮ ಜಯಂತಿ ಸಮಯದಲ್ಲಿ ನವದೆಹಲಿಯ ಜಹಾಂಗೀರ್‌ಪುರಿಯಲ್ಲೂ ಗಲಭೆ ನಡೆದಿತ್ತು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ಎಲ್ಲಾ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು.
Recommended Video
ಗಲಭೆ, ಹಿಂಸಾಚಾರ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಬೇಕು. ಆದ್ದರಿಂದ ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶ ಮಾಡಬೇಕು. ಪ್ರಕರಣಗಳ ಬಗ್ಗೆ ಎನ್‌ಐಎ ತನಿಖೆಗೆ ಸಹ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿತ್ತು.
ಶ್ರೀರಾಮನವಮಿ ಮತ್ತು ಹನುಮ ಜಯಂತಿ ಸಂದರ್ಭದಲ್ಲಿ ಶಾಂತಿಯುತ ಮೆರವಣಿಗೆ ನಡೆಯುವ ವೇಳೆ ಕಲ್ಲು ತೂರಾಟ ನಡೆದಿದೆ. ಆಗ ಗಲಭೆಯಾಗಿದೆ. ಇದರಲ್ಲಿ ಐಎಸ್‌ಐಎಸ್ ಮತ್ತು ಇತರ ದೇಶ ವಿರೋಧಿ ಶಕ್ತಿಗಳ ಕೈವಾಡವಿದೆ. ಈ ಹಿನ್ನಲೆಯಲ್ಲಿ ಎನ್‌ಐಎ ತನಿಖೆಯಾಗಬೇಕು ಎಂದು ವಕೀಲ ವಿನೀತ್ ಜಿಂದಾಲ್ ಅರ್ಜಿಯಲ್ಲಿ ಮನವಿ ಮಾಡಿದ್ದರು.
ದೆಹಲಿಯ ಜಹಂಗೀರ್‌ಪುರಿನಲ್ಲಿ ಹನುಮ ಜಯಂತಿ ಸಂದರ್ಭದಲ್ಲಿ ನಡೆದ ಗಲಭೆ ಬಗ್ಗೆ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ವಕೀಲ ಅಮೃತ್ ಪಾಲ್ ಸಿಂಗ್ ಸಹ ಸುಪ್ರೀಂಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.












Click it and Unblock the Notifications