ವೈರಲ್ ವಿಡೀಯೋ: ವಾಜಪೇಯಿ ಶ್ರದ್ಧಾಂಜಲಿ ಸಭೆಯಲ್ಲಿ ನಕ್ಕ ಬಿಜೆಪಿ ನಾಯಕರು!
Recommended Video

ರಾಯ್ಪುರ, ಆಗಸ್ಟ್ 24: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಗಹಗಹಿಸಿ ನಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಛತ್ತೀಸ್ ಗಢದ ರಾಯ್ಪುರಲ್ಲಿ ಆ.23 ರಂದು ನಡೆಯುತ್ತಿದ್ದ ವಾಜಪೇಯಿ ಶ್ರದ್ಧಾಂಜಲಿ ಸಭೆಯಲ್ಲಿ, ಛತ್ತೀಸ್ ಗಢದ ಕೃಷಿ ಸಚಿವ ಬೃಜ್ಮೋಹನ್ ಅಗರ್ವಾಲ್ ಮತ್ತು ಆರೋಗ್ಯ ಸಚಿವ ಅಜಯ್ ಚಂದ್ರಶೇಖರ್ ಅವರು ಹಾಸ್ಯ ಮಾಡಿಕೊಂಡು ನಗುತ್ತಿದ್ದರು.
A clip of former PM #AtalBihariVajpayee Ji’s “ प्रार्थना सभा”
— Priyanka Gandhi (@PriyankaJi_) August 22, 2018
Organised by Chhattisgarh Govt., just look the faces of Cabinet of BJP.
Shameless creatures 👎 pic.twitter.com/56pE6S2bSB
ಮಾಜಿ ಪ್ರಧಾನಿಯೊಬ್ಬರ ಶ್ರದ್ಧಾಂಜಲಿ ಸಭೆಯಲ್ಲಿ ಅವರದೇ ಪಕ್ಷದ ನಾಯಕರು, ಅದರಲ್ಲೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಗಳು ಹೀಗೆ ನಗುತ್ತಿರುವುದನ್ನು ಹಲವರು ಖಂಡಿಸಿದ್ದಾರೆ.
ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತರಾದರು.

ಅವರ ಮರಣಾನಂತರ ಅವರ ನೆನಪಿಗಾಗಿ ಛತ್ತೀಸ್ ಗಢ ರಾಜಧಾನಿ ನಯಾ ರಾಯ್ಪುರವನ್ನು ಅಟಲ್ ನಗರ ಎಂದು ಮರುನಾಮಕರಣ ಮಾಡಲು ಛತ್ತೀಸ್ ಗಢ ಸರ್ಕಾರ ನಿರ್ಧರಿಸಿತ್ತು. ಆದರೆ ಅಟಲ್ ಜೀ ಅವರಿಗೆ ಇಷ್ಟೆಲ್ಲ ಗೌರವ ನೀಡಲು ಹೊರಟ ಛತ್ತೀಸ್ ಗಢದ ನಾಯಕರೇ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಹೀಗೆ, ಗಾಂಭೀರ್ಯ ಮರೆತು ನಕ್ಕಿದ್ದು ಸರಿಯೇ ಎಂಬುದು ಈಗಿರುವ ಪ್ರಶ್ನೆ!
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications