Madhya Pradesh ಬಿಜೆಪಿ ಕಾರ್ಪೋರೇಟರ್ ಪತಿಯೊಂದಿಗೆ ವಾಗ್ವಾದ: ಬಟ್ಟೆ ಹರಿದುಕೊಂಡ ಪೊಲೀಸ್ ಅಧಿಕಾರಿ!
ಮಧ್ಯಪ್ರದೇಶದಲ್ಲಿ ಬಿಜೆಪಿ ಪಾಲಿಕೆ ಸದಸ್ಯೆಯ ಪತಿಯೊಂದಿಗೆ ವಾಗ್ವಾದ ನಡೆಸಿದ ಪೊಲೀಸ್ ಅಧಿಕಾರಿಯೊಬ್ಬರು, ಪೊಲೀಸ್ ಸಮವಸ್ತ್ರ ಕಳಚುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಪೊಲೀಸರು ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಪೊಲೀಸ್ ಅಧಿಕಾರಿಯೊಬ್ಬರು ಪೊಲೀಸ್ ಠಾಣೆಯಲ್ಲೇ ಅವರ ಸಮವಸ್ತ್ರವನ್ನು ಕಳಚುತ್ತಾರೆ ಎಂದರೆ ಏನರ್ಥ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಘಟನೆಯ ಹಿನ್ನೆಲೆ ಏನು ?
ಮಧ್ಯಪ್ರದೇಶದ ಸಿಂಗ್ರೌಲಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕಿಯ ಪತಿಯೊಂದಿಗೆ ಪೊಲೀಸ್ ಅಧಿಕಾರಿಗೆ ವಾಗ್ವಾದ ಏರ್ಪಟ್ಟಿದೆ. ಇದಾದ ನಂತರ ಸಿಟ್ಟಿನಿಂದ ಪೊಲೀಸ್ ಅಧಿಕಾರಿ ಅಂಗಿ ಕಳಚಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸೋಮವಾರ ವೈರಲ್ ಆಗಿದೆ. ಇದು ಮಧ್ಯಪ್ರದೇಶದಲ್ಲಿ ಪೊಲೀಸರ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಪೊಲೀಸ್ ಅಧಿಕಾರಿಗಳು, ಈ ಘಟನೆ ಫೆಬ್ರವರಿಯಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ವಿನೋದ್ ಮಿಶ್ರಾ ಎನ್ನುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ. ಬಿಜೆಪಿಯ ಪಾಲಿಕೆ ಸದಸ್ಯೆಯ ಪತಿಯೊಂದಿಗೆ ವಾಗ್ವಾದ ನಡೆಸಿದ ನಂತರ ಪೊಲೀಸ್ ಅಧಿಕಾರಿಯೇ ಸಮವಸ್ತ್ರ ಕಳಚಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಕ್ರಮವೂ ಆಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೇ, ಈ ಪ್ರಕರಣದ ಬಗ್ಗೆ ಅಲ್ಲಿನ ಎಎಸ್ಪಿ ಶಿವಕುಮಾರ್ ವರ್ಮಾ ಅವರು ಸಹ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣವು ಫೆಬ್ರವರಿಯಲ್ಲಿ ನಡೆದಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ ಅಂದಿನ ಎಸ್ಪಿ ಯೂಸುಫ್ ಖುರೇಷಿ ಅವರು ತನಿಖೆ ನಡೆಸಿ ವರದಿಯನ್ನು ಸಹ ನೀಡಿದ್ದರು. ಆ ತನಿಖಾ ವರದಿಯ ಆಧಾರದ ಮೇಲೆ ಈಗ ಇರುವ ಎಸ್ಪಿ ನಿವೇದಿತಾ ಗುಪ್ತಾ ಅವರು, ವಿನೋದ್ ಮಿಶ್ರಾ ಅವರ ವಾರ್ಷಿಕ ವೇತನ ಹೆಚ್ಚಳ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಆದೇಶ ಹೊರಡಿಸಿದ್ದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
सिंगरौली -
— MP Youth Congress (@IYCMadhya) September 16, 2024
भाजपा नेता ने कहा एएसआई से कहा वर्दी उतरवा लूँगा।
एएसआई ने कहा लो उतार देता हूँ वर्दी।
बैढ़न कोतवाली थाने में पदस्थ ASI विनोद मिश्रा आक्रोश में आकर थाने में ही वर्दी उतारकर फैंक दी
ASI का कहना है कि भाजपा नेता ने वर्दी उतरवाने की दी थी धमकी।
मुख्यमंत्री जी… pic.twitter.com/9a6P00Yrcw
ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದ ಕಾಂಗ್ರೆಸ್
ಈ ವೈರಲ್ ವಿಡಿಯೋವನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮಧ್ಯಪ್ರದೇಶ ಯುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ದೂರಿದೆ. ಅಲ್ಲದೇ ಅಪರಾಧಿಗಳು ನಿರ್ಭೀತಿಯಿಂದ ಇದ್ದಾರೆ. ರಾಜ್ಯದಲ್ಲಿ ಅಪರಾಧಿಗಳನ್ನು ನಿಯಂತ್ರಿಸುವವರೇ ಇಲ್ಲ. ಆದರೆ, ಇದನ್ನು ತಡೆಯಬೇಕಾಗಿರುವ ಪೊಲೀಸರೇ ಕೆಲವು ಪ್ರದೇಶದಲ್ಲಿ ಅಸಹಾಯಕ ಪರಿಸ್ಥಿತಿಯನ್ನು ತಲುಪಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
ಮಧ್ಯಪ್ರದೇಶದ ಸಿಂಗ್ರೌಲಿಯದ ವೈಧಾನ್ ಎನ್ನುವ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಪಾಲಿಕೆ ಸದಸ್ಯೆಯ ಒತ್ತಡಕ್ಕೆ ರೋಸಿಹೋದ ಪೊಲೀಸ್ ಅಧಿಕಾರಿ ಅವರ ಸಮವಸ್ತ್ರವನ್ನೇ ಹರಿದುಕೊಂಡಿದ್ದಾರೆ. ಇದು ಮಧ್ಯಪ್ರದೇಶದ ಗೃಹ ಇಲಾಖೆಯ ಕಾರ್ಯವೈಖರಿ ಹಾಗೂ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆಡಳಿತ ಹೇಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದೂ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ಚರಂಡಿ ಕಟ್ಟುವ ವಿಚಾರಕ್ಕೆ ವಾಗ್ವಾದ
ಮಧ್ಯಪ್ರದೇಶದಲ್ಲಿ ಪೊಲೀಸ್ ಅಧಿಕಾರಿ ಸಮವಸ್ತ್ರ ಕಳಚಿರುವ ವಿಷಯ ಇದೀಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಆದರೆ, ಈ ಘಟನೆ ನಡೆಯುವುದಕ್ಕೆ ಕಾರಣವಾಗಿರುವುದು ಒಂದು ಚರಂಡಿ ನಿರ್ಮಾಣದ ವಿಷಯ. ಹೌದು ಚರಂಡಿ ನಿರ್ಮಾಣದ ವಿಷಯಕ್ಕೆ ನಡೆದ ವಾಗ್ವಾದ ಇದೀಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಸಿಂಗ್ರೌಲಿಯದ ವೈಧಾನ್ ಪ್ರದೇಶದಲ್ಲಿ ಚರಂಡಿ ನಿರ್ಮಾಣದ ವಿಚಾರವಾಗಿ ಪೊಲೀಸ್ ಅಧಿಕಾರಿ ಹಾಗೂ ಸ್ಥಳೀಯ ಪಾಲಿಕೆಯ ಬಿಜೆಪಿ ಸದಸ್ಯೆಯ ಪತಿಯೊಂದಿಗೆ ವಾಗ್ವಾದ ನಡೆದಿತ್ತು.
ನಾನು ಆ ರೀತಿ ಮಾಡಬಾರದಿತ್ತು ಎಂದ ಪೊಲೀಸ್ ಅಧಿಕಾರಿ
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮಿಶ್ರ ಅವರು ಜೋರು ಜೋರಾಗಿ ಮಾತನಾಡುತ್ತಿದ್ದರು. ಆಗ ನೀವು ಆವೇಶಭರಿತರಾಗಿ ಮಾತನಾಡುವುದನ್ನು ಮುಂದುವರಿಸಿದರೆ ನಾನು ನಿಮ್ಮ ಸಮವಸ್ತ್ರವನ್ನು ಹರಿದು ಹಾಕುತ್ತೇನೆ ಎಂದಷ್ಟೇ ಹೇಳಿದ್ದೆ ಎಂದು ಪಾಲಿಕೆ ಸದಸ್ಯೆಯ ಪತಿ ಅರ್ಜುನ್ ಗುಪ್ತಾ ಹೇಳಿದ್ದಾರೆ.
ವಿಡಿಯೋ ವೈರಲ್ ಆದ ಮೇಲೆ ಈ ಘಟನೆಯ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿ ಮಿಶ್ರಾ ಅವರು, ಗುಪ್ತಾ ಅವರು ನನ್ನ ಬಟ್ಟೆಗಳನ್ನು ಹರಿದು ಹಾಕುವುದಾಗಿ ಬೆದರಿಸಿದ್ದರು. ಅಲ್ಲದೇ ಠಾಣೆಯ ಮುಖ್ಯ ಪೊಲೀಸ್ ಅಧಿಕಾರಿಯ ಮುಂದೆಯೇ ನಿನ್ನನ್ನು ಸೇವೆಯಿಂದ ತೆಗೆಸುತ್ತೇನೆ ಎಂದೂ ಹೇಳಿದ್ದರು. ನನ್ನನ್ನು ಅವಮಾನ ಮಾಡಿದ್ದಕ್ಕಾಗಿ ಬೇಸರಗೊಂಡು ಸಮವಸ್ತ್ರವನ್ನು ಕಳಚಿದ್ದೆ. ನಾನು ಆ ರೀತಿ ವರ್ತಿಸಬಾರದಾಗಿತ್ತು ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications