Viral Video: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ನನ್ನೊಂದಿಗೆ ಕೈಜೋಡಿಸಿ ಎಂದು ಮುಕ್ತ ಆಹ್ವಾನ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

Viral Video: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಮುಕ್ತವಾಗಿ ಆಹ್ವಾನ ನೀಡಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ಹೈದರಾಬಾದ್‌ನಲ್ಲಿ ಭಾನುವಾರ 9,400 ಕೋಟಿ ರೂ. ಮೌಲ್ಯದ ಆರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ಮುಕ್ತವಾಗಿ ತಮ್ಮೊಂದಿಗೆ ಕೈ ಜೋಡಿಸುವಂತೆ ಕರೆ ನೀಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಎ. ರೇವಂತ್ ರೆಡ್ಡಿ ಅವರನ್ನು ಉದ್ದೇಶಿಸಿ ನೀವು ನನ್ನೊಂದಿಗೆ ಸೇರಿಕೊಂಡರೆ ಉತ್ತಮ ಎಂದು ಹೇಳಿದ್ದಾರೆ.

ಈಚೆಗೆ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬಿಜೆಪಿಯು ಮುಂದಿನ ಗುರಿ ತೆಲಂಗಾಣ ಎಂದು ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಹಾಸ್ಯಾಸ್ಮಕವಾಗಿಯಾದರೂ ತೆಲಂಗಾಣದ ಮುಖ್ಯಮಂತ್ರಿಗೆ ತಮ್ಮೊಂದಿಗೆ ಕೈಜೋಡಿಸುವಂತೆ ಹೇಳಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

Viral Video

ಕೇಂದ್ರ ಸರ್ಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ 10 ವರ್ಷಗಳಲ್ಲಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಗುಜರಾತ್‌ಗೆ ನೀಡಿದ್ದು ಏನೇ ಇರಲಿ, ನಾನು ನಿಮಗೆ ನೀಡಲು ಸಿದ್ಧನಿದ್ದೇನೆ. ಆದರೆ ರಾಜ್ಯವು ಈಗ ಕೇಂದ್ರದಿಂದ ಪಡೆಯುತ್ತಿರುವ ಮೊತ್ತದಲ್ಲಿ ಅರ್ಧದಷ್ಟು ಮಾತ್ರ ಉಳಿಯುತ್ತದೆ ಮತ್ತು ನೀವು ನಿಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿಯೇ, ನೀವು ನನ್ನೊಂದಿಗೆ ಸೇರುವುದು ಉತ್ತಮ ಎಂದು ಪ್ರಧಾನಿ ಮೋದಿ ಅವರು ನಗುತ್ತಲ್ಲೇ ಹೇಳಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರ ಗುಜರಾತ್‌ಗೆ ಬೆಂಬಲ ನೀಡಿದಂತೆ ತೆಲಂಗಾಣವನ್ನು ಬೆಂಬಲಿಸಬೇಕೆಂದು ರೇವಂತ್ ರೆಡ್ಡಿ ಅವರು ಈ ಹಿಂದೆ ಮನವಿ ಮಾಡಿದ್ದರು. ಈ ವಿಷಯವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ರೇವಂತ್ ರೆಡ್ಡಿ ಅವರು ರಾಜಕೀಯ ಹೇಳಿಕೆಗಳನ್ನು ಕೊಡುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ, ನಾನು ಕೂಡ ಹಾಗೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ರೈಲ್ವೆ ಬಜೆಟ್ 1,000 ಕೋಟಿ ರೂ. ಆದರೆ ಈಗ ತೆಲಂಗಾಣಕ್ಕೆ ಮಾತ್ರ ಬಜೆಟ್‌ನಲ್ಲಿ 5,500 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ ಎಂದಿದ್ದಾರೆ.

ಪ್ರಧಾನಿಯವರು 9,400 ಕೋಟಿ ರೂ. ಮೌಲ್ಯದ ಆರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಹೈದರಾಬಾದ್‌ನ HICCಯಲ್ಲಿ ಮಾಡಿದ ಭಾಷಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಿಂದ ತೆಲಂಗಾಣವು ಹೆಚ್ಚಿನ ಪ್ರಯೋಜನವನ್ನು ಪಡೆದುಕೊಂಡಿದೆ. ದೇಶದೊಂದಿಗೆ ತೆಲಂಗಾಣವು ಸಹ ಅಭಿವೃದ್ಧಿ ಹೊಂದುತ್ತದೆ ಎಂದಿದ್ದಾರೆ. ತೆಲಂಗಾಣದಲ್ಲಿ ಜಾರಿಯಾಗಿರುವ ಯೋಜನೆಗಳು ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ತೆಲಂಗಾಣದ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಮುಂದಿನ ಟಾರ್ಗೆಟ್ ತೆಲಂಗಾಣ ಎಂದ ಬಿಜೆಪಿ

ಇನ್ನು ಈಚೆಗೆ ಪಶ್ವಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮುಂದಿನ ಗುರಿ ತೆಲಂಗಾಣ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇದೀಗ ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಆಹ್ವಾನ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+