ಒಂದೇ.. ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ 11.45 ಕೋಟಿ ರೂ. ಚಾರ್ಜ್: ಕಿಂಗ್ ಕೊಹ್ಲಿ ಕೊಟ್ಟ ಸ್ಪಷ್ಟನೆ ಹೀಗಿದೆ
ನವದೆಹಲಿ, ಆಗಸ್ಟ್, 12: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದಕ್ಕೆ 11.45 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇನ್ನು ಇದಕ್ಕೆ ಸ್ವತಃ ಕಿಂಗ್ ಕೊಹ್ಲಿ ತಮ್ಮ ಟ್ವೀಟ್‌ನಲ್ಲಿ ಇದು ಸುಳ್ಳು ಸುದ್ದಿ ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
While I am grateful and indebted to all that I’ve received in life, the news that has been making rounds about my social media earnings is not true. 🙏
— Virat Kohli (@imVkohli) August 12, 2023
ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್ ಹಾಕಲು 11.45 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ವಿರಾಟ್ ಕೊಹ್ಲಿಯವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಹೂಪರ್ ಹೆಚ್.ಕ್ಯು. ಪ್ರಕಾರ ಅಗ್ರ 19ರಲ್ಲಿ ಸ್ಥಾನ ಪಡೆದಿರುವ ವಿರಾಟ್ ಕೊಹ್ಲಿ, ಒಂದು ಇನ್ಸ್ಟಾ ಪೋಸ್ಟ್‌ಗೆ ಬರೋಬ್ಬರಿ 11.45 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ ಎಂದು ವರದಿಯಾಗಿತ್ತು. ಇದೀಗ ಈ ವದಂತಿಯ ಬಗ್ಗೆ ತಮ್ಮ ಟ್ವಿಟರ್ ಖಾತೆ ಮೂಲಕ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ, ನಾನು ಈ ಜೀವನದಲ್ಲಿ ಏನೆಲ್ಲ ಪಡೆದುಕೊಂಡಿದ್ದೇನೆಯೋ ಅದಕ್ಕೆ ಕೃತಜ್ಞನಾಗಿದ್ದೇನೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ನನ್ನ ಗಳಿಕೆಯ ಆದಾಯದ ಬಗ್ಗೆ ಪ್ರಕಟಿಸಿರುವ ಸುದ್ದಿ ಸುಳ್ಳು ಎಂದು ಬರೆದುಕೊಂಡಿದ್ದಾರೆ.
ಇನ್ನು ಪೋರ್ಚುಗಲ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್‌ಗೆ 26.75 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ಈ ಮೂಲಕ ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಆದಾಯ ಗಳಿಸುವವರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. ಮತ್ತು ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ 21.49 ಕೋಟಿ ರೂಪಾಯಿ ಚಾರ್ಜ್ ಮಾಡುವ ಅರ್ಜೆಂಟೈನಾದ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ 2ನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿತ್ತು.

ಇನ್ನು ಭಾರತೀಯರ ವಿಚಾರಕ್ಕೆ ಬಂದರೆ ವಿರಾಟ್ ನಂತರ, ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಿಂದ 4.4 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿತ್ತು.












Click it and Unblock the Notifications