ಪ್ರಧಾನಿ ಮೋದಿಯವರೇ ಒಮ್ಮೆ ಮಣಿಪುರಕ್ಕೆ ಭೇಟಿ ನೀಡಿ: ರಾಹುಲ್ ಗಾಂಧಿ ಹೇಳಿದ್ದೇನು?
Rahul Gandhi: ರಾಹುಲ್ ಗಾಂಧಿ ಅವರು ಅಸ್ಸಾಂ & ಮಣಿಪುರಕ್ಕೆ ಭೇಟಿ ನೀಡಿದ್ದು, ಪ್ರವಾಹದಲ್ಲಿ ಸಿಲುಕಿರುವ ಜನರು ಮತ್ತು ಕೋಮು ಗಲಭೆಯಲ್ಲಿ ಸಂತ್ರಸ್ತರಾದ ಪ್ರವಾಹ ಪೀಡಿತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇನ್ನೂ ಇದೇ ವೇಳೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಮೊದಲು ಅಸ್ಸಾಂನ ಸಿಲ್ಚಾರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಲ್ಲಿಂದ ಫುಲೆರ್ಟಲ್‌ಗೆ ತೆರಳಿ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ ಪ್ರವಾಹ ಪೀಡಿತ ಜನರೊಂದಿಗೆ ಸಂವಾದ ನಡೆಸಿದರು.

ಮಣಿಪುರದಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆದಿದ್ದು, ನಾನು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ಮಾತುಕತೆಯ ಮೂಲಕ ನಾವು ಶಾಂತಿಯನ್ನು ಕಂಡುಕೊಳ್ಳುತ್ತೇವೆ. ಅಗತ್ಯವಿರುವುದನ್ನು ಮಾಡಲು ನಾವು ಸಿದ್ಧರಿದ್ದೇವೆ. ನಾವು ಪ್ರಗತಿಯಲ್ಲಿ ಸಂತೋಷವಾಗಿಲ್ಲ. ಮಣಿಪುರಕ್ಕೆ ಪ್ರಧಾನಿ ಮೋದಿವಯರ ಭೇಟಿಯ ಅಗತ್ಯವಿದೆ ಎಂದರು.

ಮಣಿಪುರಲ್ಲಿ ಏನಾಗುತ್ತಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿನ ಜನರ ನೋವನ್ನು ಅವರು ಅರಿಯಬೇಕಿದೆ ಎಂದು ಹೇಳಿದರು.
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಹಾನಿಗೊಳಗಾಗಿದ್ದ ಚುರಚಂದಪುರಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಮಹಿಳೆಯರು ಮತ್ತು ಮಕ್ಕಳ ಜೊತೆಗೆ ಮಾತನಾಡಿ, ಅಹವಾಲು ಸ್ವೀಕರಿಸಿದರು. ಇದೇ ವೇಳೆ ಅಸ್ಸಾಂನಲ್ಲಿ ಉಂಟಾದ ಪ್ರವಾಹದ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದರು.
ಎಚ್.ವಿಶ್ವನಾಥ್ ರೋಲ್ ಕಾಲ್ ಗಿರಾಕಿ: ಹಗರಣವೇ ಆಗಿಲ್ಲ, ಇನ್ನು ಹೇಗೆ ಆಚೆಗೆ ಬರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿರುಗೇಟು ಕೊಟ್ಟರು. ಹಾಗೆಯೇ ಇದೇ ವೇಳೆ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಏ ಯಾರ್ರಿ.. ಅವ್ನು ವಿಶ್ವನಾಥ್ ಹಾ.. ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ? ಅವ್ನು, ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದು ಫೋಟೊ ಇದೆ. ಅವ್ನು ಏಕ ವಚನ ಬಳಸಿದ್ರೆ, ನನಗೂ ಕೂಡ ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತದೆ ಎಂದರು.
ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು. ಅವರ ಅಪ್ಪನಂಗೆ ಮಾತನಾಡುತ್ತೇನೆ. ಮೊದ್ಲು ಮರ್ಯಾದೆ ಕೊಟ್ಟು ಮರ್ಯಾದೆ ತೆಗೆದುಕೊಳ್ಳಲಿ. ವಿಶ್ವನಾಥ್ ಥರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತಾ ಅಷ್ಟೇ ಬೆಲೆ ಕೊಡ್ತೀವಿ. ಅದನ್ನ ಉಳಿಸಿಕೊಳ್ಳಲಿ ಎಂದು ಹಳ್ಳಿಹಕ್ಕಿ ವಿಶ್ವನಾಥ್ ವಿರುದ್ಧ ಚಾಮರಾಜನಗರದಲ್ಲಿ ಸಚಿವ ಬೈರತಿ ಸುರೇಶ್ ವಾಗ್ದಾಳಿ ನಡೆಸಿದರು.
ಮುಡಾದಲ್ಲಿ ಯಾವುದೇ ಹಗರಣವಾಗಿಲ್ಲ. ಇನ್ನು ಹೇಗೆ ಆಚೆಗೆ ಬರಲಿದೆ, ಇದಕ್ಕೂ ಡಿ.ಕೆ.ಶಿವಕುಮಾರ್‌ಗೂ ಯಾವುದೇ ಸಂಬಂಧವಿಲ್ಲ. ಘಟನೆ ಈಗ ತನಿಖೆ ಹಂತದಲ್ಲಿದೆ ಎಂದು ಹೇಳುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ಹಗರಣ ಎಂದೇ ಸಾಬೀತಾಗಿಲ್ಲ, ಸಿಬಿಐಗೆ ಏಕೆ ಕೊಡಬೇಕು? ನಮ್ಮ ರಾಜ್ಯದಲ್ಲಿ ಪೊಲೀಸರು ಇಲ್ವಾ? ಹಗರಣವೇ ಆಗಿಲ್ಲ ಎಂದು ದೃಢಪಡದೇ ಸಿಬಿಐಗೆ ಏಕೆ ಕೊಡಬೇಕು? ಬಿಜೆಪಿಯವರು ಸಿಬಿಐಗೆ ಕೊಟ್ಟು ಏನು ಮಹಾ ಮಾಡಿದ್ದಾರೆ?. ಅವರು ಎಷ್ಟು ಸಿಬಿಐಗೆ ಕೊಟ್ಟಿದ್ದಾರೆ? ಇಬ್ಬರು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನಾಲ್ಕು ವಾರಗಳ ಸಮಯ ಇದೆ. ಬಿಜೆಪಿ-ಜೆಡಿಎಸ್ ಅವರು ಹೇಳಿದಂಗೆ ಕೇಳುವುದಕ್ಕೆ ಆಗುವುದಿಲ್ಲ ಎಂದರು.
ರಾಮನಗರವನ್ನು ಬೆಂಗಳೂರಿಗೆ ಸೇರ್ಪಡೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಬೆಂಗಳೂರು ನಗರಾಭಿವೃದ್ಧಿ ಸಚಿವರು ಇದ್ದಾರೆ. ಅವರು ನಿರ್ಧಾರ ತೆಗೆದುಕೊಂಡ ಬಳಿಕ ಚರ್ಚೆ ನಡೆಸುತ್ತೇವೆ ಎಂದರು. ಇದೇ ವೇಳೆ, ಕಾಂಗ್ರೆಸ್‌ನಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಇರುವುದು ಒಂದೇ ಬಣ.. ಅದು ಕಾಂಗ್ರೆಸ್ ಬಣ ಎಂದರು.












Click it and Unblock the Notifications