ಕೇರಳ ಆರ್ ಎಸ್ ಎಸ್ ಕಾರ್ಯಕರ್ತನ ಸಾವಿಗೆ ರಾಜನಾಥ್ ಸಂತಾಪ

ತಿರುವನಂತಪುರಂ, ಜುಲೈ 30: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಜುಲೈ 29 ರಂದು ಹತ್ಯೆಗೊಳಗಾದ ಕೇರಳದ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ ಸಾವಿನ ಕುರಿತು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಸಂತಾಪ ವ್ಯಕ್ತಪಡಿಸಿದರು.

"ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಶಾಂತಿ-ಸುವ್ಯವಸ್ಥೆಯ ಕುರಿತು ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ರಾಜಕೀಯ ಪ್ರೇರಿತ ಹಿಂಸೆ ಎಂಬುದು ಪ್ರಜಾಪ್ರಭುತ್ವದಲ್ಲಿ ಕ್ಷಮಿಸುವ ವಿಷಯವಲ್ಲ. ಕೇರಳದಲ್ಲಿ ಇಂಥ ಹಿಂಸೆ ನಿಲ್ಲುತ್ತದೆ ಮತ್ತು ಈ ಘಟನೆಗೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆಂದು ನಾನು ನಿರೀಕ್ಷಿಸುತ್ತೇನೆ" ಎಂದು ರಾಜನಾಥ್ ಸೀಂಗ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ಮುಗಿಸಿಕೊಂಡು ಹಿಂದಿರುಗುತ್ತಿದ್ದ ಅರೆಸ್ಸೆಸ್ ಕಾರ್ಯಕರ್ತ ರಾಜೇಶ್ ಎಡವಕೊಡೆ ಎಂಬುವವರ ಮೇಲೆ ತಿರವನಂತಪುರಂನ ಶ್ರೀಕಾರ್ಯಂ ಎಂಬಲ್ಲಿ ಜುಲೈ 29, ಶನಿವಾರ ಸಂಜೆ ಮಾರಾಕಾಸ್ತ್ರಗಳಿಂದ ದಾಳಿನಡೆಸಲಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದರು.

VKerala: Rajnath Singh express concern over RSS worker's killing

ಹತ್ಯೆಗೆ ಸಿಪಿಎಂ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ ಕೇರಳ ಬಿಜೆಪಿ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+