ಭಾರತೀಯ ನೌಕಾಪಡೆ ಮಾಜಿ ಮುಖ್ಯಸ್ಥರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಂಕಷ್ಟ: ಪತಿ, ಪತ್ನಿಗೆ ಪ್ರತ್ಯೇಕ ದಿನಾಂಕ ನಿಗದಿ
ಭಾರತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತದಾರರ ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಲಕ್ಷಾಂತರ ಜನರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಇದೀಗ ಗೋವಾದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಮತ್ತು ಅವರ ಪತ್ನಿಗೆ ಸಮಸ್ಯೆ ಎದುರಾಗಿರುವುದು ವರದಿಯಾಗಿದೆ. ಈ ಸಂಬಂಧ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಗೋವಾದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗದಿಂದ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಮತ್ತು ಅವರ ಪತ್ನಿಗೆ ನೋಟಿಸ್‌ಗಳು ಬಂದವು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ದೇಶದ ಮಾಜಿ ಸೈನಿಕರನ್ನು ನಡೆಸಿಕೊಂಡಿರುವ ರೀತಿಗೆ ಆಕ್ಷೇಪಣೆ ವ್ಯಕ್ತವಾಗಿದೆ.

ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರ ಅವರು ಗೋವಾದಲ್ಲಿ ನೆಲೆಸಿದ್ದರು. ಅಲ್ಲದೇ ನೌಕಾಪಡೆಯಲ್ಲಿ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿರುವ, ವೀರ ಚಕ್ರ ಪ್ರಶಸ್ತಿ ಪುರಸ್ಕೃತರಾದ ಅಡ್ಮಿರಲ್ ಅವರನ್ನು ಅನ್‌ಮ್ಯಾಪ್ಡ್ ವರ್ಗದ ಅಡಿಯಲ್ಲಿ ಗುರುತಿಸಲಾಗಿದೆ. ಆದರೂ ನೋಟಿಸ್‌ಗಳು ಹೇಗೆ ಬಂದವು ಎನ್ನುವ ವಿಚಾರವು ಚರ್ಚೆಗೆ ಕಾರಣವಾಗಿದೆ.
ನನ್ನ ಪತ್ನಿ ಮತ್ತು ನನಗೆ ಭಾರತೀಯ ಚುನಾವಣಾ ಆಯೋಗದ ಮುಂದೆ ಹಾಜರಾಗುವುದಕ್ಕೆ ಬೇರೆ ಬೇರೆ ದಿನಾಂಕಗಳನ್ನು ನಿಗದಿ ಮಾಡಲಾಗಿದೆ. ನಾವು ಅವರ ವಿನಂತಿಯನ್ನು ಅನುಸರಿಸುತ್ತೇವೆ. ನೋಟಿಸ್‌ನ ಭಾಷೆ ಸಾಕಷ್ಟು ಜಟಿಲವಾಗಿದೆ ಮತ್ತು ಅರ್ಥಮಾಡಿಕೊಳ್ಳಲು ಕಷ್ಟ ಎಂದು ಅಡ್ಮಿರಲ್ ಪ್ರಕಾಶ್ ಅವರು ಹೇಳಿದ್ದಾರೆ.
ನೋಟಿಸ್‌ನಲ್ಲಿ ಏನಿದೆ ?
ಭಾರತೀಯ ಚುನಾವಣಾ ಆಯೋಗ ನೀಡಿದ ನೋಟಿಸ್‌ನಲ್ಲಿ ನಿಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದೆ. ನೀವು ಸಹಿ ಮಾಡಿದ ಎಣಿಕೆ ಫಾರ್ಮ್ ಅನ್ನು ಸ್ವೀಕರಿಸಲಾಗಿದೆ. ಪರಿಶೀಲನೆಯ ನಂತರ, ಹಿಂದಿನ SIR ಸಮಯದಲ್ಲಿ ಸಿದ್ಧಪಡಿಸಿದ ಮತದಾರರ ಪಟ್ಟಿಯಲ್ಲಿ ನಿಮ್ಮನ್ನು ಅಥವಾ ನಿಮ್ಮ ಸಂಬಂಧಿಕರನ್ನು ನೋಂದಾಯಿತ ಮತದಾರರಾಗಿ ಸೇರಿಸುವ ವಿವರಗಳನ್ನು ನೀವು ಭರ್ತಿ ಮಾಡಿಲ್ಲ ಎಂದು ಗಮನಿಸಲಾಗಿದೆ ಎಂದು ಹೇಳಲಾಗಿದೆ.
ಭಾನುವಾರ ಸೋಷಿಯಲ್ ಮೀಡಿಯಾ ಎಕ್ಸನಲ್ಲಿ ಟ್ವೀಟ್ ಮಾಡಿದ್ದ ಪ್ರಕಾಶ್ ಅವರು, 20 ವರ್ಷಗಳ ಹಿಂದೆ ನಿವೃತ್ತರಾದಾಗಿನಿಂದ ನನಗೆ ಯಾವುದೇ ವಿಶೇಷ ಸವಲತ್ತುಗಳ ಅಗತ್ಯವಿಲ್ಲ ಮತ್ತು ಎಂದಿಗೂ ಕೇಳಿಲ್ಲ. ನನ್ನ ಹೆಂಡತಿ ಮತ್ತು ನಾನು ಅಗತ್ಯವಿರುವಂತೆ ಎಸ್‌ಐಆರ್ ಫಾರ್ಮ್‌ಗಳನ್ನು ಭರ್ತಿ ಮಾಡಿದ್ದೇವೆ. ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಗೋವಾ ಡ್ರಾಫ್ಟ್ ಮತದಾರರ ಪಟ್ಟಿ 2026 ರಲ್ಲಿ ನಮ್ಮ ಹೆಸರುಗಳು ಕಾಣಿಸಿಕೊಂಡಿರುವುದನ್ನು ನೋಡಿ ಸಂತೋಷಪಟ್ಟಿದ್ದೇವೆ. ಆದಾಗ್ಯೂ, ನಾವು ಚುನಾವಣಾ ಆಯೋಗದ ಸೂಚನೆಗಳನ್ನು ಅನುಸರಿಸುತ್ತೇವೆ ಎಂದು ಹೇಳಿದ್ದರು.
ಗೋವಾದಲ್ಲಿ ಕೊನೆಯ ಎಸ್‌ಐಆರ್ ಪ್ರಕ್ರಿಯೆ ನಡೆದ 2002ರ ಮತದಾರರ ಪಟ್ಟಿಯಲ್ಲಿ ಪ್ರಕಾಶ್ ಅವರ ಯಾವುದೇ ದಾಖಲೆ ಕಂಡುಬಂದಿಲ್ಲ. ಎಣಿಕೆ ನಮೂನೆಯಲ್ಲಿ, ಕೆಲವು ವಿವರಗಳನ್ನು ಭರ್ತಿ ಮಾಡಲಾಗಿಲ್ಲ ಮತ್ತು ಆದ್ದರಿಂದ ನೋಟಿಸ್ ನೀಡಲಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
I neither need, nor have ever asked for any special privileges since retirement 20 yrs ago. My wife & I had filled the SIR forms as reqd & were pleased to see our names figured in the Goa Draft Electoral Roll 2026 on the EC website. We will, however comply with EC notices. 1/2 https://t.co/l5iqtjoO8D
— Adm. Arun Prakash (@arunp2810) January 11, 2026
ಈಚೆಗೆ ನಿವೃತ್ತ ನೌಕಾ ಅಧಿಕಾರಿ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ದಕ್ಷಿಣ ಗೋವಾ ಸಂಸದ ವಿರಿಯಾಟೊ ಫೆರ್ನಾಂಡಿಸ್ ಅವರು ಸಹ ಭಾರತೀಯ ಚುನಾವಣಾ ಆಯೋಗದಿಂದ ನೋಟಿಸ್ ಸ್ವೀಕರಿಸಿದ್ದರು. ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಎರಡನೇ ಪ್ರಕರಣವಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications