ಆಸ್ಪತ್ರೆಯಲ್ಲೂ ಮತದಾನ ಜಾಗೃತಿಗೆ ಮುಂದಾದ ಆಯೋಗ, ಹೇಗೆ?

ಛತ್ತೀಸ್‌ಗಢ, ಮಾರ್ಚ್ 27: ಲೋಕಸಭೆ ಚುನಾವಣೆ ಇನ್ನೇನು ಹತ್ತಿರವಾಗುತ್ತಿದ್ದು, ಪ್ರತಿಯೊಬ್ಬರನ್ನು ಮತದಾನ ಮಾಡುವಂತೆ ಹುರಿದುಂಬಿಸಲು ಚುನಾವಣಾ ಆಯೋಗ ಅದೇನೇನು ಕಸರತ್ತು ಮಾಡುತ್ತಿದೆ ನೋಡಿ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಛತ್ತೀಸ್‌ಗಢದ ಜಗಲ್‌ಪುರ ಜಿಲ್ಲಾ ಆಸ್ಪತ್ರೆಯ ಓಪಿಡಿ ಫಾರಂ ಮೇಲೂ ಕೂಡ 'ಮತದಾನ ಮಾಡಿ ನಿಮ್ಮ ಕರ್ತವ್ಯ ನಿಭಾಯಿಸಿ' ಎಂದು ಬರೆದು ಜಾಗೃತಿ ಮೂಡಿಸಲಾಗುತ್ತಿದೆ. ಛತ್ತೀಸ್‌ಗಢದಲ್ಲಿ ಏಪ್ರಿಲ್ 11,18,23 ಒಟ್ಟು ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ.

ಕೇವಲ ಛತ್ತೀಸ್‌ಗಢ ಮಾತ್ರವಲ್ಲದೆ ಸಾಕಷ್ಟು ರಾಜ್ಯಗಳಲ್ಲಿ ಮತದಾನ ಅರಿವು ಮೂಡಿಸಲಾಗುತ್ತಿದೆ. ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿ ಟಿಕೆಟ್ ಮೂಲಕ, ಹೋಟೆಲ್‌ ಬಿಲ್‌ಗಳಲ್ಲಿ, ನಂದಿನಿ ಹಾಲಿನ ಪ್ಯಾಕೇಟ್‌ಗಳ ಮೇಲೆ ಹೀಗೆ ವಿವಿಧ ಮಾದರಿಯಲ್ಲಿ ಮತದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ.

Voting awareness in Hospital by Election commission

ಮೊದಲ ಹಂತದಲ್ಲಿ 20 ರಾಜ್ಯಗಳ 91 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಆಂಧ್ರ, ಅರುಣಾಚಲ, ಗೋವಾ, ಗುಜರಾತ್‌, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತೆಲಂಗಾಣ, ತಮಿಳುನಾಡು, ಉತ್ತರಾಖಂಡ್, ಅಂಡಮಾನ್- ನಿಕೋಬಾರ್, ದಾದ್ರಾ ನಗರ್‌ಹವೇಲಿ, ದಮನ್ ಅಂಡ್ ದಿಯು, ಲಕ್ಷದ್ವೀಪ, ದಿಲ್ಲಿ, ಪುದುಚೇರಿ, ಚಂಡೀಗಢ.

Voting awareness in Hospital by Election commission

ಎರಡು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಕರ್ನಾಟಕ, ಮಣಿಪುರ, ರಾಜಸ್ಥಾನ, ತ್ರಿಪುರಾ.

ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಅಸ್ಸಾಂ, ಛತ್ತೀಸ್‌ಗಢ

ನಾಲ್ಕುಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ

ಐದು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಮ್ಮು ಮತ್ತು ಕಾಶ್ಮೀರ

ಏಳು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+