Just in : ಮುರ್ಮುರನ್ನು ಬೆಂಬಲಿಸಿದ ಎಸ್ಪಿ ಮಿತ್ರ ಪಕ್ಷಕ್ಕೆ ಭದ್ರತೆ
ನವದೆಹಲಿ, ಜುಲೈ 22: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದಕ್ಕಾಗಿ ಉತ್ತರ ಪ್ರದೇಶದ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪ್ರಮುಖ ಮಿತ್ರ ಪಕ್ಷಕ್ಕೆ 'ವೈ' ಭದ್ರತೆಯನ್ನು ('Y' security) ನೀಡಲಾಗಿದೆ.
ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರು ರಾಷ್ಟ್ರಪತಿ ಚುನಾವಣೆಗೂ ಮುನ್ನ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಕಳೆದ ವಾರ, ಅಮಿತ್ ಶಾ, ದ್ರೌಪದಿ ಮುರ್ಮು ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯ ನಂತರ ಪ್ರತಿಪಕ್ಷಗಳೊಂದಿಗೆ ಮೈತ್ರಿ ಮುರಿಯಲು ನಿರ್ಧರಿಸಿದ್ದೇನೆ ಎಂದು ರಾಜ್‌ಭರ್ ಹೇಳಿದರು. ಅವರ ಈ ನಡೆ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡುತ್ತದೆ ಎಂಬುದನ್ನು ಸೂಚಿಸಿದೆ.

ಆದರೂ, ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ, ತಮ್ಮ ಪಕ್ಷವು ಇನ್ನೂ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಇನ್ನೂ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದೇನೆ, ರಾಷ್ಟ್ರಪತಿ ಚುನಾವಣೆಯಲ್ಲಿ ನನ್ನ ಪಕ್ಷವು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದೆ' ಎಂದು ಹೇಳಿದ್ದಾರೆ.
2019 ರಲ್ಲಿ ಪಕ್ಷವನ್ನು ಬದಲಾಯಿಸಿದ್ದ ಮಾಜಿ ಬಿಜೆಪಿ ಮಿತ್ರರಾದ ರಾಜ್‌ಭರ್, ಅಧ್ಯಕ್ಷೀಯ ಚುನಾವಣೆ ಮತ್ತು ಮೈತ್ರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಅಖಿಲೇಶ್ ಯಾದವ್ ಅವರೊಂದಿಗೆ ಸಮಯ ಕೇಳಿದ್ದೇನೆ. ಸಮಾಜವಾದಿ ಪಕ್ಷದ ಮುಖ್ಯಸ್ಥರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ' ಎಂದು ಹೇಳಿದ್ದಾರೆ.
ಓಂ ಪ್ರಕಾಶ್ ರಾಜ್‌ಭರ್ ಅವರು ತಮ್ಮ ಮೈತ್ರಿ ಪಕ್ಷಗಳನ್ನು ಗುರಿಯಾಗಿಸಿಕೊಂಡು ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿದ್ದಾರೆ. ಸಮಾಜವಾದಿ ಪಕ್ಷವು ಮತಕ್ಕಾಗಿ ಮುಸ್ಲಿಮರಿಗೆ "ಬೆದರಿಕೆ" ನೀಡುತ್ತಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು.
Recommended Video
"ಸಮಾಜವಾದಿ ಪಕ್ಷವು (ಎಸ್‌ಪಿ) ಮುಸ್ಲಿಮರನ್ನು ಬೆದರಿಸುವ ಮೂಲಕ ಮತಗಳನ್ನು ಪಡೆಯುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ಅವರ ಹಕ್ಕುಗಳನ್ನು ನೀಡುವ ಸಮಯ ಬಂದಾಗ, ಪಕ್ಷವು ಅವರಿಗೆ ಬೆನ್ನು ತಿರುಗಿಸುತ್ತದೆ" ಎಂದು ರಾಜ್‌ಭರ್ ಹೇಳಿದ್ದಾರೆ.
ಸದ್ಯ ಅವರ ಪಕ್ಕೆ ಸರ್ಕಾರದಿಂದ 'ವೈ' ಭದ್ರತೆಯನ್ನು ('Y' security) ನೀಡಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications