ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Just in : ಮುರ್ಮುರನ್ನು ಬೆಂಬಲಿಸಿದ ಎಸ್ಪಿ ಮಿತ್ರ ಪಕ್ಷಕ್ಕೆ ಭದ್ರತೆ

|
Google Oneindia Kannada News

ನವದೆಹಲಿ, ಜುಲೈ 22: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದಕ್ಕಾಗಿ ಉತ್ತರ ಪ್ರದೇಶದ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪ್ರಮುಖ ಮಿತ್ರ ಪಕ್ಷಕ್ಕೆ 'ವೈ' ಭದ್ರತೆಯನ್ನು ('Y' security) ನೀಡಲಾಗಿದೆ.

ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರು ರಾಷ್ಟ್ರಪತಿ ಚುನಾವಣೆಗೂ ಮುನ್ನ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ಕಳೆದ ವಾರ, ಅಮಿತ್ ಶಾ, ದ್ರೌಪದಿ ಮುರ್ಮು ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯ ನಂತರ ಪ್ರತಿಪಕ್ಷಗಳೊಂದಿಗೆ ಮೈತ್ರಿ ಮುರಿಯಲು ನಿರ್ಧರಿಸಿದ್ದೇನೆ ಎಂದು ರಾಜ್‌ಭರ್ ಹೇಳಿದರು. ಅವರ ಈ ನಡೆ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡುತ್ತದೆ ಎಂಬುದನ್ನು ಸೂಚಿಸಿದೆ.

Voting For Droupadi Murmu: Akhilesh Yadav Ally Gets Security Upgrade

ಆದರೂ, ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ, ತಮ್ಮ ಪಕ್ಷವು ಇನ್ನೂ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಇನ್ನೂ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದೇನೆ, ರಾಷ್ಟ್ರಪತಿ ಚುನಾವಣೆಯಲ್ಲಿ ನನ್ನ ಪಕ್ಷವು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದೆ' ಎಂದು ಹೇಳಿದ್ದಾರೆ.

2019 ರಲ್ಲಿ ಪಕ್ಷವನ್ನು ಬದಲಾಯಿಸಿದ್ದ ಮಾಜಿ ಬಿಜೆಪಿ ಮಿತ್ರರಾದ ರಾಜ್‌ಭರ್, ಅಧ್ಯಕ್ಷೀಯ ಚುನಾವಣೆ ಮತ್ತು ಮೈತ್ರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಅಖಿಲೇಶ್ ಯಾದವ್ ಅವರೊಂದಿಗೆ ಸಮಯ ಕೇಳಿದ್ದೇನೆ. ಸಮಾಜವಾದಿ ಪಕ್ಷದ ಮುಖ್ಯಸ್ಥರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ' ಎಂದು ಹೇಳಿದ್ದಾರೆ.

ಓಂ ಪ್ರಕಾಶ್ ರಾಜ್‌ಭರ್ ಅವರು ತಮ್ಮ ಮೈತ್ರಿ ಪಕ್ಷಗಳನ್ನು ಗುರಿಯಾಗಿಸಿಕೊಂಡು ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿದ್ದಾರೆ. ಸಮಾಜವಾದಿ ಪಕ್ಷವು ಮತಕ್ಕಾಗಿ ಮುಸ್ಲಿಮರಿಗೆ "ಬೆದರಿಕೆ" ನೀಡುತ್ತಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

Recommended Video

Rocky Pointing ಟೀಂ ಇಂಡಿಯಾ ಕೋಚ್ ಆಗಿದ್ದಿದ್ರೆ Virat Kohli ಗೆ ಏನ್ ಮಾಡ್ತಿದ್ರು? | *Cricket | OneIndia

"ಸಮಾಜವಾದಿ ಪಕ್ಷವು (ಎಸ್‌ಪಿ) ಮುಸ್ಲಿಮರನ್ನು ಬೆದರಿಸುವ ಮೂಲಕ ಮತಗಳನ್ನು ಪಡೆಯುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ಅವರ ಹಕ್ಕುಗಳನ್ನು ನೀಡುವ ಸಮಯ ಬಂದಾಗ, ಪಕ್ಷವು ಅವರಿಗೆ ಬೆನ್ನು ತಿರುಗಿಸುತ್ತದೆ" ಎಂದು ರಾಜ್‌ಭರ್ ಹೇಳಿದ್ದಾರೆ.

ಸದ್ಯ ಅವರ ಪಕ್ಕೆ ಸರ್ಕಾರದಿಂದ 'ವೈ' ಭದ್ರತೆಯನ್ನು ('Y' security) ನೀಡಲಾಗಿದೆ.

English summary
president election: Akhilesh Yadav's Samajwadi Party's Ally Gets 'Y' security after he supported National Democratic Alliance (NDA) candidate Droupadi Murmu. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X