ಉಪರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ವೆಂಕಯ್ಯ ನಾಯ್ಡು

Posted By:
Subscribe to Oneindia Kannada

ನವದೆಹಲಿ, ಜುಲೈ 18 : ಉಪರಾಷ್ಟ್ರಪತಿ ಚುನಾವಣೆಗಾಗಿ ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಇಂದು (ಮಂಗಳವಾರ) ನಾಮಪತ್ರ ಸಲ್ಲಿಸಿದರು.

ವೆಂಕಯ್ಯ ನಾಯ್ಡು ಉಮೇದುವಾರಿಕೆ ಸಲ್ಲಿಕೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ರಾಮ್ ವಿಲಾಸ್ ಪಾಸ್ವಾನ್, ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಹಲವು ಹಿರಿಯು ಮುಖಂಡರು ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು.

VP elections: Venkaiah Naidu, Gandhi to file nominations today

ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ, ಅಂದೇ ಫಲಿತಾಂಶ

ಇನ್ನು ಪ್ರತಿಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಅವರು ಕೂಡು ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ ಕೋವಿಂದ್ ಅವರ ಆಯ್ಕೆಯ ವಿಚಾರದಲ್ಲಿಯೂ ಕೊನೆ ಕ್ಷಣದವರೆಗೆ ಗುಟ್ಟು ಕಾಪಾಡಿಕೊಂಡಿದ್ದರು. ಅದೇ ರೀತಿ ಉಪರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಕೊನೆ ಕ್ಷಣದಲ್ಲಿ ಪ್ರಕಟಿಸಲಾಗಿದೆ.

Siddaramaiah Accuses BJP On Dividing Society In The Name Of Caste | Oneindia Kannada

ಆಗಸ್ಟ್ 5 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಅಂದೇ ಮತ ಎಣಿಕೆಯೂ ನಡೆಯಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Venkaiah Naidu and Gopalkrishna Gandhi will file their nomination papers for vice presidential elections. Naidu who was selected as the NDA's candidate is expected to file his nominations by 11 am at New Delhi.
Please Wait while comments are loading...