Get Updates
Get notified of breaking news, exclusive insights, and must-see stories!

Waqf Bill: ಇಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ: ಅಂಗೀಕಾರಕ್ಕೆ ಸರ್ಕಾರ ಒತ್ತಾಯ- ಸಂಸತ್ತಿನಲ್ಲಿ ಕೋಲಾಹಲ ಸಾಧ್ಯತೆ

ದೆಹಲಿ ಏಪ್ರಿಲ್ 2: ವಿರೋಧ ಪಕ್ಷಗಳು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB)ನಂತಹ ಮುಸ್ಲಿಂ ಸಂಸ್ಥೆಗಳ ಪ್ರತಿರೋಧವನ್ನು ಧಿಕ್ಕರಿಸಿ ಬುಧವಾರ (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ನಿರ್ಧರಿಸಿದೆ.

ಹೌದು ವಕ್ಫ್ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. 8 ಗಂಟೆಗಳ ಚರ್ಚೆಯ ನಂತರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಚರ್ಚೆಗೆ ಪ್ರತಿಕ್ರಿಯಿಸಲಿದ್ದು, ಮಸೂದೆಯನ್ನು ಅಂಗೀಕರಿಸಲು ಮತದಾನ ನಡೆಯಲಿದೆ. ಬುಧವಾರವೇ ಲೋಕಸಭೆಯಲ್ಲಿ ಮಸೂದೆ ಅಂಗೀಕರಿಸಲು ಸಿದ್ಧತೆಗಳು ನಡೆಯುತ್ತಿವೆ. ಇದರ ನಂತರ ಈ ಅಧಿವೇಶನದ ಉಳಿದ ಎರಡು ದಿನಗಳಲ್ಲಿ ಅಂದರೆ ಗುರುವಾರ ಮತ್ತು ಶುಕ್ರವಾರ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ಮತ್ತು ಅಲ್ಲಿಂದ ಅಂಗೀಕಾರ ಪಡೆಯಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

Waqf Bill in Lok Sabha today Government insists on passage uproar expected in Parliament

ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು, ಮಸೂದೆಯನ್ನು ಸದನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಆದರೆ ಇದನ್ನು ವಿರೋಧಿಸಿ ವಿರೋಧ ಪಕ್ಷಗಳು ಸಭೆಯಿಂದ ಹೊರ ನಡೆದಿವೆ. ಸರ್ಕಾರ ತನ್ನ ಕಾರ್ಯಸೂಚಿಯನ್ನು ಹೇರುತ್ತಿದೆ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಪ್ರತಿ ದಾಳಿ ಮಾಡಿದ್ದಾರೆ. 'ವಿರೋಧ ಪಕ್ಷದ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿಲ್ಲ. ಈ ಸದನವು ಕೇವಲ ಆಡಳಿತ ಪಕ್ಷಕ್ಕೆ ಸೇರಿದ್ದಲ್ಲ, ಅದು ಸಾರ್ವಜನಿಕರಿಗೆ ಸೇರಿದ್ದು' ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ವಾಗ್ದಾಳಿ ಮಾಡಿದ್ದಾರೆ. ಅಲ್ಲದೆ ಈ ತೀರ್ಮಾನದಲ್ಲಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

ವಕ್ಫ್ ಮಂಡಳಿ ಲೂಟಿಯ ತಾಣ: ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸುವವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಮಂಡಳಿಗಳು ಸ್ವಾರ್ಥ ಹಿತಾಸಕ್ತಿಗಳು ಮತ್ತು ಲೂಟಿಯ ತಾಣಗಳಾಗಿ ಮಾರ್ಪಟ್ಟಿವೆ. ವಕ್ಫ್ ಮಸೂದೆಯನ್ನು ಅಂಗೀಕರಿಸಿದರೆ ರಾಜ್ಯದ ಅಭಿವೃದ್ಧಿಯಲ್ಲಿ ನಿಮಗೆ ನ್ಯಾಯಯುತ ಪಾಲು ಸಿಗುತ್ತದೆ. ಆದರೆ ನೀವು ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ವಿಶೇಷ ರಿಯಾಯಿತಿಗಳನ್ನು ನಿರೀಕ್ಷಿಸಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ. ಇದರರ್ಥ ನೀವು ಬೀದಿಗಳಲ್ಲಿ ನಮಾಜ್ ಮಾಡುವಂತಿಲ್ಲ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವಂತಿಲ್ಲ. ನೀವು ಹೀಗೆ ಮಾಡಿದರೆ, 'ಬುಲ್ಡೋಜರ್ ನ್ಯಾಯ'ವನ್ನು ಎದುರಿಸಲು ಸಿದ್ಧರಾಗಿರಿ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

Waqf Bill in Lok Sabha today Government insists on passage uproar expected in Parliament

ವಿರೋಧ ಪಕ್ಷಗಳ ವಿರೋಧ

ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಕಳೆದ ವರ್ಷ ಮಸೂದೆಯನ್ನು ಮಂಡಿಸುವಾಗ, ಸರ್ಕಾರವು ಅದನ್ನು ಎರಡೂ ಸದನಗಳ ಜಂಟಿ ಸಮಿತಿಗೆ ಕಳುಹಿಸಲು ಪ್ರಸ್ತಾಪಿಸಿತ್ತು. ಸಮಿತಿಯ ವರದಿಯ ನಂತರ, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮೂಲ ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿತ್ತು. ಇದಾದ ಬಳಿಕ ಲೋಕಸಭೆಯಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ನಿರ್ಧರಿಸಿದೆ.

ಆದರೆ ಇದಕ್ಕೆ ವಿರೋಧ ಪಕ್ಷ ವಿರೊಧ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿಲ್ಲ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಕಿಡಿ ಕಾರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಮಗ್ರ ಚರ್ಚೆ ನಡೆಸಬೇಕೆಂಬ ನಮ್ಮ ಬೇಡಿಕೆಯನ್ನು ಸ್ವೀಕರಿಸಲಾಗಿಲ್ಲ ಎಂದು ಅವರು ಹೇಳಿದರು. ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಚರ್ಚೆ ಬಯಸಿದ್ದೆವು, ಮತದಾರರ ಚೀಟಿ ವಿಷಯದ ಬಗ್ಗೆ ಚರ್ಚೆ ಬಯಸಿದ್ದೆವು, ಇತರ ಹಲವು ವಿಷಯಗಳ ಬಗ್ಗೆ ಚರ್ಚೆ ಬಯಸಿದ್ದೆವು, ಆದರೆ ಕೇಂದ್ರ ಸರ್ಕಾರ ವಿರೋಧ ಪಕ್ಷದ ಬೇಡಿಕೆಯನ್ನು ಒಪ್ಪಿಕೊಳ್ಳುತ್ತಿಲ್ಲ. ನಮಗೆ ಸಭಾತ್ಯಾಗ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ಗೊಗೊಯ್ ಹೇಳಿದರು.

ನಕಲಿ ಮತದಾರರ ಚೀಟಿಗಳ ವಿಷಯವನ್ನು ನಾವು ನಿರಂತರವಾಗಿ ಎತ್ತುತ್ತಿದ್ದೇವೆ, ಆದರೆ ಸರ್ಕಾರ ಅದರ ಬಗ್ಗೆ ಚರ್ಚಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ. ಸಂಸತ್ತಿನ ಸದನವು ಆಡಳಿತ ಪಕ್ಷಕ್ಕೆ ಮಾತ್ರವಲ್ಲ, ವಿರೋಧ ಪಕ್ಷಕ್ಕೂ ಅಷ್ಟೇ ಮುಖ್ಯವಾಗಿದೆ. ಮಣಿಪುರದ ನಿರ್ಣಯದ ಬಗ್ಗೆ, ವಕ್ಫ್ ತಿದ್ದುಪಡಿ ಮಸೂದೆಯ ನಂತರ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು ಅವರು ಹೇಳುತ್ತಿದ್ದಾರೆ. ನಾವು ಜನರಿಂದ ಆಯ್ಕೆಯಾಗಿದ್ದೇವೆ ಮತ್ತು ಅವರಿಗೆ ನಾವು ಜವಾಬ್ದಾರರು. ಕೇಂದ್ರ ಸರ್ಕಾರ ಹೇಳಿದಂತೆ ನಾವು ನಡೆಯಲು ಆಗುವುದಿಲ್ಲ ಎಂದಿದ್ದಾರೆ.

ಒಟ್ಟಿನಲ್ಲಿ ವಕ್ಫ್ ಮಸೂದೆಯನ್ನು ಅಂಗೀಕರಿಸಲು ಇಂದು ಮತದಾನ ನಡೆಯಲಿದ್ದು, ಫಲಿತಾಂಶ ಯಾವ ರೀತಿ ಬರಲಿದೆ ಎಂದು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+