ನಕಲಿ ವಿ.ವಿಗಳ ಪಟ್ಟಿ ಪ್ರಕಟ: ಬೆಳಗಾವಿಯಲ್ಲಿ 1, ದೆಹಲಿಯಲ್ಲಿ 7
ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿರುವ 23 ನಕಲಿ ವಿಶ್ವವಿದ್ಯಾಲಯ, 279 ನಕಲಿ ತಾಂತ್ರಿಕ ಕೇಂದ್ರಗಳನ್ನು ಪತ್ತೆ ಹಚ್ಚಿ ಪಟ್ಟಿಯನ್ನು ಪ್ರಕಟಿಸಿದೆ.
ನವದೆಹಲಿ, ಮಾರ್ಚ್ 22: ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 23 ನಕಲಿ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಿದೆ. ಈ ಪೈಕಿ 9 ವಿಶ್ವವಿದ್ಯಾನಿಲಯಗಳು ಉತ್ತರ ಪ್ರದೇಶದಲ್ಲಿದ್ದರೆ, 7 ವಿಶ್ವವಿದ್ಯಾನಿಲಯಗಳು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿವೆ. ಕರ್ನಾಟಕದ ಒಂದು ವಿಶ್ವವಿದ್ಯಾಲಯವು ಇಲ್ಲಿದೆ.
ಮಾನವ ಸಂಪನ್ಮೂಲ ರಾಜ್ಯ ಸಚಿವ ಮಹೇಂದ್ರ ನಾಥ್ ಪಾಂಡೆ ಅವರು ನಕಲಿ ವಿಶ್ವವಿದ್ಯಾಲಯಗಳ ಕುರಿತು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದು, ಮಾನ್ಯತೆಯಿಲ್ಲದಿದ್ದರೂ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಪದವಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದರು.
ನಕಲಿ ವಿಶ್ವವಿದ್ಯಾಲಯಗಳ ಕುರಿತ ಹೆಚ್ಚಿನ ಮಾಹಿತಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ(UGC) ದ ವೆಬ್ ಸೈಟ್ www.ugc.ac.in. ನಲ್ಲಿ ಲಭ್ಯವಿದೆ.

23 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿ ಇಂತಿದೆ:
ಬಿಹಾರ
1) ಮೈಥಿಲಿ ಯೂನಿವರ್ಸಿಟಿ/ವಿಶ್ವವಿದ್ಯಾಲಯ, ದರ್ಭಾಂಗ, ಬಿಹಾರ.
ದೆಹಲಿ
2) ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ದರಿಯಾಗಂಜ್, ದೆಹಲಿ.
3) ಯುನೈಟೆಡ್ ನೇಶನ್ಸ್ ಯೂನಿವರ್ಸಿಟಿ, ದೆಹಲಿ.
4) ವೋಕೇಶನಲ್ ಯೂನಿವರ್ಸಿಟಿ, ದೆಹಲಿ.
5) ADR- ಸೆಂಟ್ರಿಕ್ ಜುರಿಡಿಕಲ್ ಯೂನಿವರ್ಸಿಟಿ, ರಾಜೇಂದ್ರ ಪ್ಲೇಸ್, ನವದೆಹಲಿ.
6) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ನವದೆಹಲಿ.
7) ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ದೆಹಲಿ.
ಕರ್ನಾಟಕ
8) ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ, ಗೋಕಾಕ್, ಬೆಳಗಾವಿ, ಕರ್ನಾಟಕ.
ಕೇರಳ
9) ಸೇಂಟ್ ಜಾನ್ಸ್ ಯೂನಿವರ್ಸಿಟಿ, ಕಿಶನತ್ತಮ್ಮ್, ಕೇರಳ.
ಮಹಾರಾಷ್ಟ್ರ
10) ರಾಜಾ ಅರೇಬಿಕ್ ಯೂನಿವರ್ಸಿಟಿ, ನಾಗ್ಪುರ್, ಮಹಾರಾಷ್ಟ್ರ.
ಪಶ್ಚಿಮ ಬಂಗಾಳ
11) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಕೋಲ್ಕತ್ತಾ.
12) ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರೀಸರ್ಚ್, ಠಾಕೂರ್ಪುರ್ಕರ್, ಕೋಲ್ಕತ್ತಾ.
ಉತ್ತರ ಪ್ರದೇಶ
13) ವಾರಣಸೇಯ ಸಂಸ್ಕೃತ ವಿಶ್ವವಿದ್ಯಾನಿಲಯ, ವಾರಣಾಸಿ, ಉತ್ತರ ಪ್ರದೇಶ.
14) ಮಹಿಳಾ ಗ್ರಾಮ್ ವಿದ್ಯಾಪೀಠ/ವಿಶ್ವವಿದ್ಯಾಲಯ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
15) ಗಾಂಧಿ ಹಿಂದಿ ವಿದ್ಯಾಪೀಠ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
16) ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ್, ಉತ್ತರ ಪ್ರದೇಶ.
17) ನೇತಾಜಿ ಸುಭಾಶ್ ಚಂದ್ರ ಬೋಸ್ ಯೂನಿವರ್ಸಿಟಿ (ಓಪನ್ ಯೂನಿವರ್ಸಿಟಿ), ಆಲಿಘರ್, ಉತ್ತರ ಪ್ರದೇಶ.
18) ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಕೋಸಿ ಕಲ್ಯಾಣ್, ಮಥುರಾ, ಉತ್ತರ ಪ್ರದೇಶ.
19) ಮಹಾರಾಣ ಪ್ರತಾಪ್ ಶಿಕ್ಷಾ ನಿಕೇತನ್ ವಿಶ್ವವಿದ್ಯಾಲಯ, ಪ್ರತಾಪ್ ಘರ್, ಉತ್ತರ ಪ್ರದೇಶ.
20) ಇಂದ್ರಪ್ರಸ್ಥ ಶಿಕ್ಷಾ ಪರಿಷದ್, ನೋಯ್ಡಾ, ಉತ್ತರ ಪ್ರದೇಶ.
21) ಗುರುಕುಲ್ ವಿಶ್ವವಿದ್ಯಾಲಯ, ವೃಂದಾವನ್, ಉತ್ತರ ಪ್ರದೇಶ.
ಒಡಿಶಾ
22) ನಭಭಾರತ್ ಶಿಕ್ಷಾ ಪರಿಷದ್, ಶಕ್ತಿನಗರ್, ರೂರ್ಕೆಲಾ, ಒಡಿಶಾ.
23) ನಾರ್ತ್ ಒರಿಸ್ಸಾ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಒಡಿಶಾ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications