UPSC: ವಿರಾಟ್ ಕೋಹ್ಲಿ ಯುಪಿಎಸ್‌ಸಿ ಟಾಪರ್ ಅನನ್ಯಾ ರೆಡ್ಡಿಗೆ ಪ್ರೇರಣೆ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಹಾಗೂ ಅವರ ಬ್ಯಾಟಿಂಗ್ ಶೈಲಿಯಿಂದಲೇ ಹಲವು ಯುವ ಆಟಗಾರರ ರೋಲ್ ಮಾಡಲ್.. ಇವರಿಗೆ ದೇಶ ಹಾಗೂ ವಿದೇಶದಲ್ಲಿ ಅಭಿಮಾನಿಗಳು ಇದ್ದಾರೆ. ಇವರ ಫಿಟ್ನೆಸ್‌ಗೆ ಹಲವು ದೇಶದ ಆಟಗಾರರು ಫಿದಾ ಆಗಿದ್ದಾರೆ. ವಿರಾಟ್ ಕೊಹ್ಲಿ ಮೈದಾನದ ಹೊರಗೂ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಇಲ್ಲಿದೆ.
ಇತ್ತೀಚಿಗೆ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶಗಳು ಹೊರ ಬಿದ್ದಿವೆ. ರ್ಯಾಂಕ್ ಪಡೆದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ತಮ್ಮ ಶ್ರಮ ಹಾಗೂ ಮಾಡಿಕೊಂಡ ಪ್ರಯತ್ನದ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಿದ್ದಾರೆ. ಈ ವೇಳೆ ಮೂರನೇ ರ್ಯಾಂಕ್ ಪಡೆದ ಡೋಣೂರು ಅನನ್ಯಾ ರೆಡ್ಡಿ, ವಿರಾಟ್ ಕೊಹ್ಲಿ ನನಗೆ ಸ್ಫೂರ್ತಿ ಎಂದು ಬಹಿರಂಗಪಡಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗವು ಏಪ್ರಿಲ್ 16 ರಂದು ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಡೋಣೂರು ಅನನ್ಯಾ ರೆಡ್ಡಿ ಅವರು ಇಡೀ ಭಾರತಕ್ಕೆ ಮೂರನೇ ರ್ಯಾಂಕ್ ಪಡೆದಿದ್ದಾರೆ. ಇದೀಗ ಮೂರನೇ ರ್ಯಾಂಕ್ ಪಡೆದಿರುವ ಅನನ್ಯಾ ರೆಡ್ಡಿ, ವಿರಾಟ್ ಕೊಹ್ಲಿಯೇ ನನಗೆ ಸ್ಫೂರ್ತಿ ಎಂದು ಬಣ್ಣಿಸಿದ್ದಾರೆ.
ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಅವರು ಒಂದು ರೀತಿಯಾಗಿ ನನಗೆ ಪ್ರೇರಣೆ ಎಂದು ನಾನು ಭಾವಿಸುತ್ತೇನೆ. ಶಿಸ್ತು ಮತ್ತು ಅವರ ಶ್ರಮವು ವಿರಾಟ್ ಕೊಹ್ಲಿಯಿಂದ ಕಲಿಯ ಬಹುದಾದ ದೊಡ್ಡ ಪಾಠವಾಗಿದೆ. ಅದಕ್ಕಾಗಿಯೇ ಅವರು ಸ್ಫೂರ್ತಿದಾಯಕರಾಗಿದ್ದಾರೆ ಎಂದು ಅನನ್ಯಾ ರೆಡ್ಡಿ ತಿಳಿಸಿದ್ದಾರೆ.
ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಆರ್‌ಸಿಬಿ ಕಳಪೆ ಪ್ರದರ್ಶನ ನೀಡುತ್ತಿದ್ದರೂ, ಕೊಹ್ಲಿ ಸೊಗಸಾದ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು ಸದ್ಯ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 7 ಪಂದ್ಯಗಳನ್ನು ಆಡಿದ್ದು, 72.20 ರ ಅತ್ಯುತ್ತಮ ಸರಾಸರಿ ಮತ್ತು 147.35 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 361 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 1 ಶತಕ ಮತ್ತು 2 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ 35 ಬೌಂಡರಿ ಹಾಗೂ 14 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಟಿ20 ವಿಶ್ವಕಪ್‌ಗೆ ತಂಡ ಸೇರುತ್ತಾರಾ?
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಇನ್ನು ತಂಡವನ್ನು ಪ್ರಕಟಿಸಿಲ್ಲ. ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ನೀಡಿದ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನಗಳು ಮೂಡಿವೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications