Priyanka Gandhi: ವಯನಾಡಿನ ಮತಗಟ್ಟೆಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯನ್ನು ತಬ್ಬಿಕೊಂಡ ಜನ- ಪ್ರೀತಿಗೆ ಆಭಾರಿ ಎಂದ 'ಕೈ' ನಾಯಕಿ
Wayanad By-Election: ಪ್ರಥಮ ಬಾರಿಗೆ ಚುನಾವಣಾ ರಾಜಕಾರಣಕ್ಕೆ ಎಂಟ್ರಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಇಂದು ವಯನಾಡಿಗೆ ಭೇಟಿ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರುವಾಗಿರುವ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಅವರನ್ನು ಯುಡಿಎಫ್ ಕಣಕ್ಕಿಳಿಸಲಾಗಿದೆ. ಈ ವೇಳೆ ಮಾತನಾಡಿರುವ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ವಯನಾಡಿನ ಮತಗಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಸಿರು ಕಣಿವೆಯ ಜನರು ತಮ್ಮನ್ನು ಪ್ರತಿನಿಧಿಸಲು ನನಗೆ ಅವಕಾಶ ನೀಡಲಿದ್ದಾರೆ. ಅವರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ನನಗೆ ಮತ ನೀಡುವ ಮೂಲಕ ಕೇರಳದ ಜನರು ಅವಕಾಶ ಕಲ್ಪಿಸಿ ಕೊಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಿಯಾಂಕಾ ಹೇಳಿದ್ದಾರೆ.

ಕೇರಳದ ಜನರು ನನಗೆ ತೋರಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ಮರೆಯುವುದಿಲ್ಲ. ಅವರ ಪ್ರೀತಿಗೆ ಕಾಣಿಕೆಯಾಗಿ ನಾನು ಇಲ್ಲಿ ಕೆಲಸ ಮಾಡಲಿದ್ದೇನೆ. ಅವರು ನನಗೆ ಅವಕಾಶವನ್ನು ನೀಡಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, 'ವಯನಾಡಿನಲ್ಲಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕಾಗಿ ಹೃದಯದಿಂದ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಇಂದು ವಯನಾಡಿನಲ್ಲಿ ಪ್ರಜಾಪ್ರಭುತ್ವ ತೀರ್ಪು ನೀಡಲಿದೆ. ನನ್ನ ಬದುಕಿನಲ್ಲಿ ಇದೊಂದು ಮಹತ್ವದ ಘಳಿಗೆಯಾಗಿ ನೆನಪುಳಿಯಲಿದೆ. ನೀವೆಲ್ಲರೂ ಮತಗಟ್ಟೆಗೆ ಭೇಟಿ ನೀಡಿ ನಿಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಚಲಾಯಿಸಲು ವಿನಮ್ರವಾಗಿ ಬೇಡಿಕೊಳ್ಳುತ್ತೇನೆ. ಮತದಾನದ ಮೂಲಕ ನೀವು ತೆಗೆದುಕೊಳ್ಳುವ ನಿಲುವು ನಮ್ಮ ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ನಾವೆಲ್ಲರೂ ವಯನಾಡಿನ ಭವಿಷ್ಯಕ್ಕಾಗಿ ಕೈಜೋಡಿಸೋಣ' ಎಂದು ತಿಳಿಸಿದ್ದಾರೆ.
ವಯನಾಡಿನ ಜನತೆಗೆ ಟ್ವೀಟ್ ಮೂಲಕ ಶುಭ ಹಾರೈಸಿರುವ ಕಾಂಗ್ರೆಸ್ ಪಕ್ಷವು, 'ವಯನಾಡಿನಲ್ಲಿ ಇಂದು ಮತದಾನದ ದಿನ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಮತಗಟ್ಟೆಗಳಿಗೆ ಭೇಟಿ ನೀಡುತ್ತಿದ್ದಾರೆ. ಮತದಾರರೊಂದಿಗೆ ಸಂವಹನ ನಡೆಸುತ್ತಿದ್ದಾರೆ. ಈ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರಿಗೆ ಹುರುಪು ತುಂಬುತ್ತಿದ್ದಾರೆ. ಅಧಿಕಾರಿಗಳು ಮತ್ತು ಸ್ವಯಂಸೇವಕರಿಗೆ ಧನ್ಯವಾದ' ಎಂದು ಹೇಳಿದೆ.
ಬುಧವಾರ ವಯನಾಡಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, 'ನಾನು ವಯನಾಡಿನಲ್ಲಿರುವ ನನ್ನ ಕುಟುಂಬವನ್ನು ತಲುಪುತ್ತಿದ್ದೇನೆ. ಈ ಚುನಾವಣೆಯಲ್ಲಿ ನನ್ನ ಸಹೋದರಿ ಪ್ರಿಯಾಂಕಾ ಗೆಲುವು ಸಾಧಿಸಲಿದ್ದಾರೆ. ಅವರು ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಲು ಸಿದ್ಧರಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಆಕೆ ಕೇವಲ ಜನಪ್ರತಿನಿಧಿಯಲ್ಲ. ಆಕೆ ನಿಮ್ಮ ಸಹೋದರಿ, ನಿಮ್ಮ ಮಗಳು ಮತ್ತು ನಿಮ್ಮ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ವಯನಾಡಿನ ಭವ್ಯತೆಯನ್ನು ಆಕೆ ಎತ್ತಿ ಹಿಡಿಯಲಿದ್ದಾಳೆ ಎಂಬ ಭರವಸೆ ನನಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಇದೇ ವೇಳೆ, ವಯನಾಡಿನ ಜನತೆಗೆ ಮತ ಚಲಾಯಿಸಲು ಮನವಿ ಮಾಡಿಕೊಂಡಿರುವ ರಾಹುಲ್ ಗಾಂಧಿ, ನೀವೆಲ್ಲರೂ ಹೊರಗೆ ಬನ್ನಿ. ಮತ ಚಲಾಯಿಸಿ. ಆಕೆಯನ್ನು ಬೆಂಬಲಿಸುವಂತೆ ನಾನು ಕೋರುತ್ತೇನೆ. ನಾವೆಲ್ಲರೂ ಜೊತೆ ಅದ್ಭುತವಾದ ಜನ ಗಳಿಸೋನ ಎಂದು ಅವರು ತಿಳಿಸಿದ್ದಾರೆ.
ಜಾರ್ಖಂಡ್ ವಿಧಾನಸಭೆಗೆ ಮೊದಲ ಹಂತದ ಚುನಾವಣೆ
ನವೆಂಬರ್ 13ರಂದು ( ಇಂದು ) ಜಾರ್ಖಂಡ್ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಎನ್‌ಡಿಎ ಹಾಗೂ ಇಂಡಿಯಾ ಮೈತ್ರಗಳು ಈ ಚುನಾವಣೆಯಲ್ಲಿ ಸೆಣಸಾಡುತ್ತಿವೆ. ಎರಡನೇ ಹಂತದ ಚುನಾವಣೆಯು ನವೆಂಬರ್ 20 ರಂದು ನಡೆಯಲಿದೆ. ವಯನಾಡು ಸೇರಿದಂತೆ ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಕರ್ನಾಟಕದ ಉಪಚುನಾವಣೆಗಳ ಫಲಿತಾಂಶವು ನವೆಂಬರ್ 23 ರಂದು ಹೊರಬೀಳಲಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications