Priyanka Gandhi: ಪ್ರಿಯಾಂಕಾ ಗಾಂಧಿ 65,000 ಸಾವಿರ ಮತಗಳಿಂದ ಭರ್ಜರಿ ಮುನ್ನಡೆ: ಲೋಕಸಭೆ ಪ್ರವೇಶದತ್ತ ಹೆಜ್ಜೆ!

ವಯನಾಡ್‌ ಲೋಕಸಭೆ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿ ಲೋಕಸಭೆ ಪ್ರವೇಶಿಸುವತ್ತ ಹೆಜ್ಜೆ ಹಾಕಿದ್ದಾರೆ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರು ಭರ್ಜರಿ 65,000 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಪಾಡಿಕೊಂಡಿದ್ದಾರೆ. ವಯನಾಡ್ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳ ಭದ್ರಕೋಟೆಯಾಗಿದೆ. ಈ ಬಾರಿ ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಪಕ್ಷಗಳನ್ನು ಹೊರತುಪಡಿಸಿ, ಉಳಿದ ಪಕ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಿತ್ತು.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇದೇ ಮೊದಲ ಬಾರಿ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದರು. ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದಾಗಿ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕಿ ಹಾಗೂ ರಾಹುಕ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. ವಯನಾಡ್ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ರಾಹುಲ್‌ಗಾಂಧಿ ಅವರನ್ನು ಕಳೆದ ಎರಡು ಬಾರಿಯೂ ಇಲ್ಲಿನ ಮತದಾರರು ಕೈಹಿಡಿದಿದ್ದರು. ಇದೀಗ ರಾಹುಲ್‌ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು.

Wayanad Results Priyanka Gandhi leads by a huge margin of 65 000 votes

ಮೊಟ್ಟ ಮೊದಲ ಚುನಾವಣೆ: ರಾಹುಲ್‌ ಗಾಂಧಿ ಅವರ ಕುಟುಂಬವು ಮೂರು ತಲೆಮಾರಿನಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿದೆ. ಪ್ರಿಯಾಂಕಾ ಗಾಂಧಿ ಅವರು ಸಹ ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಹಾಗೂ ಚುನಾವಣೆ ಪ್ರಚಾರಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಆದರೆ, ಅವರು ಇದೇ ಮೊದಲ ಬಾರಿ ವಯನಾಡ್ ಲೋಕಸಭೆ ಉಪ ಚುನಾವಣೆ ಕಣದಲ್ಲಿ ಸ್ಪರ್ಧೆಗೆ ಇಳಿದಿದ್ದರು.

ಪ್ರಿಯಾಂಕಾ ಗಾಂಧಿ ಅವರು ಇದೀಗ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕಾಂಗ್ರೆಸ್‌ನ ಹಲವು ಚುನಾವಣೆ ಪ್ರಚಾರ ಸಭೆಗಳಲ್ಲಿ ಹಾಗೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲೂ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದರು. ಪ್ರಿಯಾಂಕಾ ಗಾಂಧಿ ಅವರನ್ನು ವಾಯನಾಡ್‌ನ ಜನ ಭರ್ಜರಿಯಾಗಿಯೇ ಬೆಂಬಲಿಸಿದ್ದರು. ಅಲ್ಲದೇ ಈ ಭಾಗದಲ್ಲಿ ಅವರು ಕಳೆದ 2019ನೇ ಸಾಲಿನ ಹಾಗೂ 2024ನೇ ಸಾಲಿನ ಲೋಕಸಭೆ ಚುನಾವಣೆಗಳಲ್ಲಿ ರಾಹುಲ್‌ಗಾಂಧಿ ಅವರ ಪರವಾಗಿ ಪ್ರಚಾರ ಮಾಡಿ ಜನರ ನಾಡಿ ಮಿಡಿತವನ್ನು ಅರಿತುಕೊಂಡಿದ್ದರು. ಅಲ್ಲದೇ ಪ್ರಿಯಾಂಕಾ ಗಾಂಧಿ ಅವರು ರಾಷ್ಟ್ರ ಮಟ್ಟದಲ್ಲಿ ಮಾತನಾಡಿದ್ದ ವಿಷಯಗಳು ಸಹ ವಯನಾಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದವು.

Wayanad Results Priyanka Gandhi leads by a huge margin of 65 000 votes

ಸಂಕಷ್ಟದಲ್ಲಿ ಜೊತೆ ನಿಂತರು: ಕೇರಳದ ವಯನಾಡ್‌ನಲ್ಲಿ ಈಚೆಗೆ ಭಾರೀ ದುರಂತ ಸಂಭವಿಸಿತ್ತು. ಇಲ್ಲಿನ ವೈತ್ತಿರಿ ತಾಲ್ಲೂಕಿನ ಮೆಪ್ಪಾಡಿ ಪುಂಜಿರಿಮಟ್ಟಂ, ಮುಂಡಕ್ಕೈ , ಚೂರಲ್ಮಲಾ ಹಾಗೂ ವೆಳ್ಳರಿಮಲ ಗ್ರಾಮಗಳಲ್ಲಿ ಸರಣಿ ಭೂಕುಸಿತವುಂಟಾಗಿತ್ತು. ಈ ಸಂಕಷ್ಟದ ಸಮಯದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ವಯನಾಡ್‌ನ ಸಂಸದ ರಾಹುಲ್‌ಗಾಂಧಿ ಅವರು ಇಲ್ಲಿನ ಜನರ ನೋವುಗಳಿಗೆ ಸ್ಪಂದಿಸಿದ್ದರು. ಅಲ್ಲದೇ ಪ್ರಿಯಾಂಕಾ ಗಾಂಧಿ ಅವರು ಸಹ ಭೇಟಿ ನೀಡಿದ್ದರು. ಹೀಗಾಗಿ, ಇಲ್ಲಿ ಅವರ ಪರ ಜನ ಒಲವು ಹೊಂದಿದ್ದಾರೆ.

ಲೋಕಸಭೆಯಲ್ಲಿ ಸಹೋದರ & ಸಹೋದರಿ: ಇನ್ನು ಪ್ರಿಯಾಂಕಾ ಗಾಂಧಿ ಅವರು ವಯನಾಡ್‌ ಲೋಕಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಲೋಕಸಭೆಯಲ್ಲಿ ಸಹೋದರ ಹಾಗೂ ಸಹೋದರಿ ಸ್ಪರ್ಧೆ (ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ) ಅವರು ಒಂದಾಗಲಿದ್ದಾರೆ. ಈಗಾಗಲೇ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಕೆಲವು ವಿಷಯಗಳನ್ನು ಎತ್ತಿಕೊಂಡು ಅದ್ಭುತವಾಗಿ ಚರ್ಚೆ ಮಾಡುತ್ತಿದ್ದಾರೆ. ಇನ್ಮುಂದೆ ಪ್ರಿಯಾಂಕಾ ಗಾಂಧಿ ಅವರು ಸಾಥ್‌ ನೀಡಲಿದ್ದಾರೆ.

ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶ: ಇನ್ನು ದೇಶದ ಎರಡು ಪ್ರಮುಖ ರಾಜ್ಯಗಳಲ್ಲೂ ಇಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆದಿತ್ತು. ಈ ಎರಡೂ ರಾಜ್ಯಗಳ ಮತ ಎಣಿಕೆಯೂ ನಡೆದಿದ್ದು, ಈ ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಹಾಗೂ ಮಹಾ ವಿಕಾಸ್‌ ಅಘಾಡಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+