ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೊಯಮತ್ತೂರು, ಸೆಪ್ಟೆಂಬರ್ 09: ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರದಂದು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್ ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆಧಾರ್ ಗುರುತಿನ ಚೀಟಿ 12ನೇ ದಾಖಲೆ ಎಂದು ಪರಿಗಣಿಸಿರುವ ಬಗ್ಗೆ ಕೇಳಿದಾಗ, ಹೌದು, ಆಧಾರ್ ಗುರುತಿನ ಚೀಟಿ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯವಾದ ದಾಖಲೆ. ಈ ಹಿಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಈ ಯೋಜನೆ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲ ಮಾಡಿದೆ ಎಂದು ಹೇಳಿದರು.
ಸಂಘಟನ್ ಶ್ರೀ ಜನ್ ಅಭಿಯಾನ್ : ಡಿ.ಕೆ.ಸುರೇಶ್
ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ 'ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು.
ಹೈಕಮಾಂಡ್ ಆದೇಶದ ಮೇರೆಗೆ ಪ್ರತಿ ಜಿಲ್ಲೆಯ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಹವಾಲುಗಳನ್ನು ಅಲಿಸಲಾಗುತ್ತಿದೆ. ಈ ಮೂಲಕ ಪಕ್ಷದ ಬಲವರ್ಧನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರ ಸಲಹೆಗಳನ್ನು ಆಲಿಸಿ ಅದಕ್ಕೆ ಪರಿಹಾರ ನೀಡುವ ಮೂಲಕ ಸಂಘಟನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆ. ಇದನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಒಡಿಸ್ಸಾದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.
ಆಡಳಿತರೂಢ ಬಿಜೆಪಿ ಸರಕಾರದ ವೈಫಲ್ಯ ಸೇರಿದಂತೆ ಯಾವ ವಿಚಾರಗಳ ಮೂಲಕ ಜನರ ಗಮನ ಸೆಳೆಯಬೇಕು ಎಂಬುದನ್ನು ಚರ್ಚಿಸಲಾಗುತ್ತಿದೆ. ರಾಜ್ಯವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ ಇದನ್ನು ಜನರಿಗೆ ಮನವರಿಕೆ ಮಾಡಬೇಕಾಗಿದೆ. ಎಐಸಿಸಿಯ ಮಾನದಂಡಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಪಕ್ಷಕ್ಕಾಗಿ ದುಡಿದಿರುವ, ಸಂಘಟನಾ ಸಾಮರ್ಥ್ಯವಿರುವ, ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿರುವ ನಾಯಕರು, ಜೊತೆಗೆ ಸಮಾಜದ ಎಲ್ಲ ಸಮುದಾಯದವರು ಹಾಗೂ ಅಲ್ಪಸಂಖ್ಯಾತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಒಡಿಸ್ಸಾ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಳಿದಾಗ, "ಒಡಿಸ್ಸಾ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಡಬಲ್ ಎಂಜಿನ್ ಸರ್ಕಾರವಿದೆ. ಅಧಿಕಾರಕ್ಕೆ ಬಂದು 16 ತಿಂಗಳು ಕಳೆದರೂ ಸಹ ಜನರ ಜೀವನದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಆರೋಗ್ಯ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದ್ದು ಜನರು ಪರದಾಡುತ್ತಿದ್ದಾರೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications