ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಶಿಷ್ಟಾಚಾರ ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್‌

|
Google Oneindia Kannada News

ನವದೆಹಲಿ, ಜುಲೈ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಇನ್ನೂ ನಿಂತಿಲ್ಲ. ಕೊವಿಡ್-19 ಭೀತಿ ಇಲ್ಲದೇ ಶಿಷ್ಟಾಚಾರವನ್ನು ಪಾಲಿಸದೇ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತೆ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಹಿಮಾಚಲ ಪ್ರದೇಶದ ಆರೋಗ್ಯ ಇಲಾಖೆ ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಖಾಚಿ ಎಚ್ಚರಿಕೆ ನೀಡಿದ್ದಾರೆ.

ಹಿಮಾಚಲ ಪ್ರದೇಶದ ಮನಾಲಿ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಕೊರೊನಾವೈರಸ್ ಸೋಂಕಿನ ಭಯವಿಲ್ಲದೇ ಓಡಾಡುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಕೊವಿಡ್-19 ನಿಯಮಗಳನ್ನು ಸಾರಾಸಗಟಾಗಿ ಉಲ್ಲಂಘಿಸುತ್ತಿದ್ದಾರೆ.

 We Can Re-imposed Restrictions Again If Protocols Not Followed: Health Ministry Alert

"ಕೊರೊನಾವೈರಸ್ ಮಾರ್ಗಸೂಚಿಗಳ ಅಡಿ ಎಲ್ಲ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಲು ನಾವು ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಎಲ್ಲ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ಶಿಷ್ಟಾಚಾರಗಳ ಪಾಲನೆ ಮಾಡಬೇಕು," ಎಂದು ಹಿಮಾಚಲ ಪ್ರದೇಶದ ಆರೋಗ್ಯ ಇಲಾಖೆ ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಖಾಚಿ ಹೇಳಿದ್ದಾರೆ.

ಕೊವಿಡ್-19 ಸಡಿಲಿಕೆ ತೆರವುಗೊಳಿಸುವ ಎಚ್ಚರಿಕೆ:
"ದೇಶದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸುತ್ತಿದ್ದಂತೆ ಹಿಮಾಚಲ ಪ್ರದೇಶದಲ್ಲಿ ಜನಸಾಗರವೇ ನೆರೆದಿದೆ. ಕೊವಿಡ್-19 ಶಿಷ್ಟಾಚಾರ ಮತ್ತು ನಿಯಮಗಳ ಉಲ್ಲಂಘನೆ ಆಗುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೇಂದ್ರ ಸರ್ಕಾರದ ಸೂಚನೆಗಳು ಪಾಲನೆ ಆಗದಿದ್ದರೆ ನಾವು ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುತ್ತೇವೆ," ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 34,703 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 51,864 ಸೋಂಕಿತರು ಗುಣಮುಖರಾಗಿದ್ದರೆ, 553 ಜನರು ಪ್ರಾಣ ಬಿಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,06,19,932ಕ್ಕೆ ಏರಿಕೆಯಾಗಿದ್ದು, 2,97,52,294 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ 4,03,281 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, 4,64,357 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
We Can Re-imposed Restrictions Again If Protocols Not Followed: Health Ministry Alert For People.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X