ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ರಂಪ್ ಔತಣಕೂಟದಲ್ಲಿ ಇದೇನು ಮೋದಿ ಸರಕಾರದ ರಾಜಕೀಯ!

|
Google Oneindia Kannada News

ನವದೆಹಲಿ, ಫೆ 23: ಬಹುನಿರೀಕ್ಷೆಯ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಭಾರತದ ಭೇಟಿಗೆ ಕ್ಷಣಗಣನೆ ಆರಂಭವಾಗಿದೆ. ಈ ಭೇಟಿಯ ಬಗ್ಗೆ ವ್ಯಂಗ್ಯವಾಡಿದ್ದ ಕಾಂಗ್ರೆಸ್, ಟ್ರಂಪ್ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ, "ಡೊನಾಲ್ಡ್​ ಟ್ರಂಪ್​ ಗಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ" ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಬಾಹುಬಲಿ ವಿಡಿಯೋ ಹಂಚಿಕೊಂಡ ಡೊನಾಲ್ಡ್ ಟ್ರಂಪ್ಬಾಹುಬಲಿ ವಿಡಿಯೋ ಹಂಚಿಕೊಂಡ ಡೊನಾಲ್ಡ್ ಟ್ರಂಪ್

"ನಮ್ಮ ಪಕ್ಷದ ನಾಯಕಿ ಮತ್ತು ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಈ ಔತಣಕೂಟಕ್ಕೆ ಕರೆದಿಲ್ಲ. ಹಾಗಾಗಿ, ನಾವು ಈ ಕೂಟದಲ್ಲಿ ಭಾಗವಹಿಸುತ್ತಿಲ್ಲ" ಎಂದು ಚೌಧುರಿ ಹೇಳಿದ್ದಾರೆ.

We Will Not Attend Banquet For Trump As Sonia Gandhi Not Invited: Adhir Ranjan Chowdhury

ದೆಹಲಿಯ ಮುಖ್ಯಮಂತ್ರಿ ಮತ್ತು ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡಾ ಈ ಔತಣಕೂಟದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಈ ಇಬ್ಬರು ನಾಯಕರನ್ನೂ ಔತಣಕೂಟಕ್ಕೆ ಆಹ್ವಾನಿಸಲಿಲ್ಲ.

ಇನ್ನು ಔತಣಕೂಟಕ್ಕೆ ಆಹ್ವಾನಿಸಲಾಗುವ ಗಣ್ಯರ ಪಟ್ಟಿ 90-95ಕ್ಕೆ ಇಳಿಯುವ ಸಾಧ್ಯತೆಯಿದೆ. ಈ ಕೂಟ ಫೆಬ್ರವರಿ 25ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.

ಔತಣಕೂಟಕ್ಕೆ ಕರೆಯಲಾಗಿರುವ ದೇಶದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕ, ಬಿಹಾರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಹರಿಯಾಣದ ಮುಖ್ಯಮಂತ್ರಿಗಳು ಮಾತ್ರ ಇದ್ದಾರೆ ಎಂದು ಹೇಳಲಾಗುತ್ತಿದೆ.

English summary
We Will Not Attend Banquet For Trump As Sonia Gandhi Not Invited: Adhir Ranjan Chowdhury.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X