Weather Forecast: ಈ ಭಾಗಗಳಲ್ಲಿ ಮುಂದಿನ ಒಂದು ವಾರ ಪೂರ್ತಿ ರಣಭೀಕರ ಮಳೆ ಮುನ್ಸೂಚನೆ
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮುಂಗಾರು ಹಿನ್ನೆಲೆ ಮುಂದಿನ ಕೆಲವು ದಿನಗಳಲ್ಲಿ ಬಹುತೇಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್ ಮತ್ತು ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ವಾರ ಪೂರ್ತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕೊಂಕಣ, ಗೋವಾದ ಪ್ರತ್ಯೇಕ ಸ್ಥಳಗಳಲ್ಲಿ, ಮಧ್ಯ ಮಹಾರಾಷ್ಟ್ರದ ಹಲವೆಡೆ ಮತ್ತು ಗುಜರಾತ್‌ನಲ್ಲಿ ಮುಂದಿನ ಏಳು ದಿನಗಳ ಕಾಲ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಭಾರೀ ಮಳೆ ಹಿನ್ನೆಲೆ ಮಹಾರಾಷ್ಟ್ರದಲ್ಲಿ ರತ್ನಗಿರಿ, ರಾಯ್‌ಗಢದಂತಹ ಕರಾವಳಿ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಬೈಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 1ರ ವರೆಗೆ ಪುಣೆ ಮತ್ತು ಸತಾರಾದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಜುಲೈ 3 ರವರೆಗೆ ಮಳೆ: ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಜುಲೈ 3ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಯಾವ್ಯಾವಾಗ ಎಲ್ಲೆಲ್ಲಿ ಮಳೆ?: ಜೂನ್ 29 ಪಶ್ಚಿಮ ಬಂಗಾಳ, ಜಾರ್ಖಂಡ್, ಜೂನ್ 30 ಪಶ್ಚಿಮ ಬಂಗಾಳ, ಒಡಿಶಾ, ಜುಲೈ 1 ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜುಲೈ 2 ಮಧ್ಯಪ್ರದೇಶ, ಛತ್ತೀಸ್‌ಗಢ, ಜುಲೈ 3ರಂದು ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 5ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಗುಡುಗು, ಮಿಂಚು ಸಹಿ ಮಳೆಯಾಗಲಿದ್ದು, ಜೊತೆಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಜುಲೈ 2ರ ವರೆಗೆ ಜಾರ್ಖಂಡ್ ರಾಜ್ಯಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಬ ಬಂಗಾಳದ ಬಂಕುರಾ, ಜಾರ್ಗ್ರಾಮ್ ಸೇರಿ ಕೆಲವು ಜಿಲ್ಲೆಗಳಿಗೂ ಜೂನ್ 30 ಮತ್ತು ಜುಲೈ 1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮುಂದಿನ ಏಳು ದಿನಗಳಲ್ಲಿ ಈಶಾನ್ಯ ಭಾರತದಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಜುಲೈ 1ರಂದು ಅರುಣಾಚಲ ಪ್ರದೇಶ ಮತ್ತು ಜುಲೈ 2 ರಂದು ನಾಗಾಲ್ಯಾಂಡ್‌ನಲ್ಲಿ ಅತೀ ಹೆಚ್ಚು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲೂ ಕೇರಳದಲ್ಲಿ ಇದೇ ರೀತಿಯ ವಾತಾವರಣ ಜುಲೈ 3ರ ವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ?: ಜೂನ್ 28ರಿಂದ ಜುಲೈ 3 ರವರೆಗೆ ಕರಾವಳಿ ಕರ್ನಾಟಕದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಜುಲೈ 1 ರಿಂದ 3ರ ವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications