IMD Weather Forecast: ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ಇದರ ನಡುವೆಯೂ ಕೆಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಜನವರಿ 23) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಇಂದು (ಜನವರಿ 23) ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ದಟ್ಟ ಮಂಜಿನ ನಡುವೆಯೇ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಚಲನೆ ಪರಿಣಾಮ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜನವರಿ 23 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರತ್ಯೇಕವಾಗು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜನವರಿ 23 ಮತ್ತು 24ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇಂದು ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬೆಳಗ್ಗೆ & ರಾತ್ರಿ ಸಮಯದಲ್ಲಿ ದಟ್ಟವಾದ ಮಂಜು ಇರುತ್ತದೆ. 24ರವರೆಗೆ ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, 26ರವರೆಗೆ ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜನವರಿ 23 ರಂದು ಹಿಮಾಚಲ ಪ್ರದೇಶ ಮತ್ತು ಬಿಹಾರದಲ್ಲಿ ಶೀತ ಗಾಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತದ ಹಲವೆಡೆ ಕನಿಷ್ಠ ತಾಪಮಾನದಲ್ಲಿ ಸುಮಾರು 2°C ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಮುಂದಿನ 3 ದಿನಗಳಲ್ಲಿ ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-3 °Cರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗುವುದಿಲ್ಲ. ಹಾಗೆತೇ ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಕಂಡುಬರುವುದಿಲ್ಲ. ಮುಂದಿನ 24 ಗಂಟೆಗಳಲ್ಲಿ ಗುಜರಾತ್‌ನ ಹಲವೆಡೆ ಕನಿಷ್ಠ ತಾಪಮಾನದಲ್ಲಿ 2-3 °C ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಂಜಿನ ಜೊತೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಅಲ್ಲದೆ, ಗಾಳಿಯ ಗುಣಮಟ್ಟ ಕಳಪೆಯಿಂದ ಕೂಡಿದ ಪರಿಣಾಮ ಇಲ್ಲಿನ ಜನ, ವಾಹನ ಸವಾರರು ಅಡಚಣೆಗಳನ್ನು ಎದುರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಕಳಪೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ವಾಹನಗಳು ಹೆಚ್ಚಾಗಿರುವುದರಿಂದ, ಅವುಗಳು ಬಿಡುವ ಹೊಗೆಯಿಂದ ಗಾಳಿಯ ಗುಣಮಟ್ಟ ಹದಗೆಡುತ್ತಲೇ ಇದೆ.












Click it and Unblock the Notifications