IMD Weather Forecast: ಇಂದು ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಚಳಿ ಮುಂದುವರೆದಿದೆ. ಇದರ ನಡುವೆಯೂ ಹಲವೆಡೆ ಜಿನುಗು ಮಳೆಯಾಗುತ್ತಿದೆ. ಹಾಗೆಯೇ ಇಂದು (ಜನವರಿ 24) ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಚಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಚಳಿ ಮುಂದುವರೆದಿದೆ. ಪರಿಣಾಮ ಈ ಭಾಗದ ಜನರು ಚಳಿಯಿಂದ ಯಾವಾಗ ಮುಕ್ತಿ ಪಡೆಯಲಿದ್ದೇವೆ ಎಂದು ಕಾಯುತ್ತಿದ್ದಾರೆ. ಮತ್ತೊಂದೆಡೆ ಚಂಡಮಾರುತದ ಪರಿಚಲನೆ ಹಿನ್ನೆಲೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪೂರ್ವ ಬಾಂಗ್ಲಾದೇಶದ ಭಾಗದಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ, ಇಂದು (ಜನವರಿ 24) ನೈಋತ್ಯ ಮಧ್ಯಪ್ರದೇಶ, ಅರುಣಾಚಲ ಪ್ರದೇಶ ಮತ್ತು ಈಶಾನ್ಯ ಅಸ್ಸಾಂನಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಕನಿಷ್ಠ ತಾಪಮಾನ ದಾಖಲು?: ಇಂದು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾವು 0°Cಗಿಂತ ಕಡಿಮೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ 1-5°C, ವಾಯುವ್ಯ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ 6-10°C, ಮಧ್ಯ, ಪಶ್ಚಿಮ ಮತ್ತು ಪೂರ್ವ ಭಾರತದಲ್ಲಿ 10-18°C ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 3 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಮಧ್ಯ ಭಾರತದ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ 48 ಗಂಟೆಗಳಲ್ಲಿ ಪೂರ್ವ ಭಾರತ ಹಾಗೂ ದೇಶದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಇನ್ನು ಇಂದು (ಜನವರಿ 24) ಹಿಮಾಚಲ ಪ್ರದೇದಲ್ಲಿ ಶೀತದ ಪ್ರಮಾಣ ಹೆಚ್ಚಿರಲಿದೆ. ಪೂರ್ವ ರಾಜಸ್ಥಾನ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌ನಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರೆಯಲಿದೆ. ಜನವರಿ ಜನವರಿ 24 ಮತ್ತು 25ರಂದು ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪೂರ್ವ ಉತ್ತರ ಪ್ರದೇಶದಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆಯೂ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈಗಾಗಲೇ 2024ರಲ್ಲಿ ಸುರಿಯ ಮುಂಗಾರು ಮಳೆಯಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.












Click it and Unblock the Notifications