IMD Weather Forecast: ಈ ಭಾಗಗಳಲ್ಲಿ ಫೆಬ್ರವರಿ 12ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

India Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಫೆಬ್ರವರಿ 12ರ ವರೆಗೂ ಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ಚಂಡಮಾರುತದ ಪರಿಚಲನೆ ಪರಿಣಾಮ ಹಲವೆಡೆ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಜಮ್ಮುವಿನ ಅಕ್ಕಪಕ್ಕದ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಇಲ್ಲಿನ ಹಲವು ಪ್ರದೇಶಗಳಲ್ಲಿ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮಧ್ಯ ಅಸ್ಸಾಂ ಅರುಣಾಚಲ ಪ್ರದೇಶ ಮತ್ತು ಈಶಾನ್ಯ ಅಸ್ಸಾಂನಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

Weather Forecast Heavy Rainfall Forecast for these states till February 12

ಇಂದು ಈ ಎರಡೂ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 8ರಿಂದ 12ರ ವರೆಗೂ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ದಟ್ಟ ಮಂಜು?: ಫೆಬ್ರವರಿ 7 ಮತ್ತು 8ರಂದು ಮೇಘಾಲಯದ ಪ್ರತ್ಯೇಕ ಪ್ರದೇಶಗಳಲ್ಲಿ, ಒಡಿಶಾದ ಪ್ರತ್ಯೇಕ ಪ್ರದೇಶ, ಹಿಮಾಚಲ ಪ್ರದೇಶಗಲ್ಲಿ ಬೆಳಗಿನ ಜಾವದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ಕೆಲವು ದಿನಗಳವರೆಗೆ ಉತ್ತರ ಭಾರತದಾದ್ಯಂತ ಪ್ರತ್ಯೇಕ ಪ್ರದೇಶಗಳಲ್ಲಿ ಶೀತದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಪಾಮಾನದ ವಿವರ: ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತ ಮತ್ತು ಮಹಾರಾಷ್ಟ್ರದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಗುವುದಿಲ್ಲ. ನಂತರದ 4 ದಿನಗಳಲ್ಲಿ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗಲಿದೆ ಎಂದು ತಿಳಿಸಿದೆ. ಮುಂದಿನ 3 ದಿನಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 2 ದಿನಗಳಲ್ಲಿ ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನ 3-5 ಡಿಗ್ರಿ ಸೆಲ್ಸಿಯಸ್‌ಗೆ ಗಣನೀಯವಾಗಿ ಇಳಿಕೆಯಾಗಲಿದ್ದು, ನಂತರದ 3 ದಿನಗಳಲ್ಲಿ ಯಾವುದೇ ಬದಲಾವಣೆ ಕಂಡುಬರುವುದಿಲ್ಲ. ಇನ್ನು ಮುಂದಿನ 2 ರಿಂದ 3ದಿನಗಳಲ್ಲಿ ಗುಜರಾತ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ಗೆ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿಯ ಹವಾಮಾನದ ವಿವರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಫೆಬ್ರವರಿ 7) ಬಳಿಗ್ಗೆ 6 ಗಂಟೆಗೆ AQI 175 ಎಂದು ದಾಖಲಾಗಿದೆ. ಫೆಬ್ರವರಿ 8 ಮತ್ತು 9ರಂದು ಭಾಗಶಃ ಮೋಡ ಕವಿದ ವಾತಾವರಣ ಜೊತೆ ದಟ್ಟ ಮಂಜು ಕೂಡ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಗಾಳಿಯ ಗುಣಮ್ಟ ಸುಧಾರಿಸುತ್ತಿದೆ. ಇದೀಗ ಬೆಳಗಿನ ವೇಳೆ ಚಳಿ ಗಾಳಿ ಹೆಚ್ಚಾಗುತ್ತಿದ್ದು, ಇದರಿಂದ ಇಲ್ಲಿನ ನಿವಾಸಿಗಳು ಬೆಳಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+