Weather forecast: "ಮೈಚಾಂಗ್" ಚಂಡಮಾರುತ ಹಿನ್ನೆಲೆ ಈ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯೋ.. ಮಳೆ, ಎಲ್ಲೆಲ್ಲಿ?
ನವದೆಹಲಿ, ನವೆಂಬರ್, 29: ಭಾರತದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಹಲವು ರಾಜ್ಯದಗಳಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ಬಾಂಗ್ಲಾದೇಶದ ಮೇಲೆ ಮಿಧಿಲಿ ಚಂಡಮಾರುತದ ವಿನಾಶಕಾರಿ ಭೂಕುಸಿತದ ಕೇವಲ ಒಂದು ವಾರದ ನಂತರ ಇದೀಗ "ಮೈಚಾಂಗ್" ಚಂಡಮಾರುತದ ಪ್ರಭಾವ ಬೀರುತ್ತಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶದ ನಡುವೆ ಒಡಿಶಾ ಸರ್ಕಾರವು ರಾಜ್ಯದ ಏಳು ಕರಾವಳಿ ಜಿಲ್ಲೆಗಳನ್ನು ಅಲರ್ಟ್‌ನಲ್ಲಿ ಇರಿಸಿದೆ. ಇದು ಡಿಸೆಂಬರ್ 2ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಸೋರ್, ಭದ್ರಕ್, ಕೇಂದ್ರಪಾರಾ, ಜಗತ್‌ಸಿಂಗ್‌ಪುರ, ಪುರಿ, ಖುರ್ದಾ ಮತ್ತು ಗಂಜಾಂ ಜಿಲ್ಲೆಗಳ ಅಧಿಕಾರಿಗಳಿಗೆ ಪತ್ರ ಬರೆದಿರುವ ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹೂ, ದಕ್ಷಿಣ ಅಂಡಮಾನ್ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಸೈಕ್ಲೋನ್ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಇನ್ನು ಡಿಸೆಂಬರ್ 1ರ ಬೆಳಗ್ಗೆಯಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಮತ್ತು ಸಮುದ್ರಕ್ಕೆ ಹೋದವರು ಆ ದಿನಾಂಕದೊಳಗೆ ಮರಳಬೇಕು ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ. ಡಿಸೆಂಬರ್ 3ರಂದು ಕೊರಾಪುಟ್, ರಾಯಗಡ, ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆಯೂ ಇದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ 1ರಿಂದ ಕೇಂದ್ರ ಬಂಗಾಳ ಕೊಲ್ಲಿಯಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ಇರಲಿದೆ. ಮತ್ತು ಡಿಸೆಂಬರ್ 2ರಂದು ಗಾಳಿಯ ವೇಗವು ಗಂಟೆಗೆ 50-60 ಕಿ.ಮೀ. ಹೆಚ್ಚಾಗಬಹುದು ಎಂದು ಸಾಹೂ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು ಸಮುದ್ರದ ಅಲೆಗಳ ಅಪ್ಪಳಿಸುವಿಕೆ ಜೋರಾಗಿರಲಿದ್ದು, ಈ ಹಿನ್ನೆಲೆ ಡಿಸೆಂಬರ್ 1ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನವೆಂಬರ್ 29ರಂದು ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 25-35 ಕಿ.ಮೀಟರ್ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ. ಈ ಭಾಗದ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 29 ಮತ್ತು ಡಿಸೆಂಬರ್ 1ರ ನಡುವೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಡಿಸೆಂಬರ್ 1ರ ಬೆಳಗ್ಗೆಯಿಂದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 40-50ನಿಂದ 60 ಕಿ.ಮೀಟರ್‌ರೆಗೂ ಗಾಳಿಯ ವೇಗವನ್ನು ನಿರೀಕ್ಷಿಸಲಾಗಿದೆ. ಡಿಸೆಂಬರ್ 2 ರಂದು ಬೆಳಿಗ್ಗೆ 60-70ರಿಂದ 80 ಕಿ.ಮೀಟರ್‌ವರೆಗೆ ಗಾಳಿಯ ವೇಗ ಇರುವ ಸಾಧ್ಯತೆಯಿದೆ. ಮಧ್ಯ ಬಂಗಾಳ ಕೊಲ್ಲಿಯಲ್ಲಿ ಡಿಸೆಂಬರ್ 1 ರಂದು ಗಂಟೆಗೆ 40-50 ಕಿ.ಮೀ. ವೇಗದಿಂದ 60 ಕಿ.ಮೀ. ವೇಗದಲ್ಲಿ, ಡಿಸೆಂಬರ್ 2ರಂದು ಗಂಟೆಗೆ 50-60 ಕಿ.ಮೀಟರ್‌ನಿಂದ 70 ಕಿ.ಮೀಟರ್‌ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ.
ನವೆಂಬರ್ 29-30 ರ ಅವಧಿಯಲ್ಲಿ ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 30ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇದೇ ರೀತಿ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಭ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಮಧ್ಯಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಪೂರ್ವ ಮಧ್ಯಪ್ರದೇಶದಲ್ಲಿ ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಮತ್ತು ಮುಂದಿನ 24 ಗಂಟೆಗಳ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಗೆಯೇ ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಚದುರಿದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಇನ್ನು ಮುಂದಿನ 5 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಮತ್ತು ಕೇರಳ ಸೇರಿದಂತೆ ಇನ್ನು ಕೆಲವು ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 29ರಿಂದ ಡಿಸೆಂಬರ್ 1 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕೇರಳದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.












Click it and Unblock the Notifications