IMD Weather Forecast: ಈ ಭಾಗಗಳಲ್ಲಿ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ಚಳಿಗಾಲ ಮುಗಿಯುವ ಹಂತದಲ್ಲಿದ್ದರೂ ಸಹ ಹಲವೆಡೆ ರಣಭೀಕರ ಚಳಿ ಮುಂದುವರೆದಿದೆ. ಇನ್ನೂ ಕೆಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದು (ಫೆಬ್ರವರಿ 12ರಂದು ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕಳೆದ 24 ಗಂಟೆಗಳಲ್ಲಿ ದೇಶದ ಹಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ ಮತ್ತು ಮಧ್ಯ ಭಾರತದಾದ್ಯಂತ ಅನೇಕ ಸ್ಥಳಗಳಲ್ಲಿ ಹಗಲಿನ ವೇಳೆ ತಾಪಮಾನ 2-3°Cರಷ್ಟು ಏರಿಕೆಯಾಗಿದೆ. ಛತ್ತೀಸ್‌ಗಢ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ರಾತ್ರಿಯ ತಾಪಮಾನವು 3-6°C ರಷ್ಟು ಹೆಚ್ಚಾಗಿದೆ. ಇದೇ ಅವಧಿಯಲ್ಲಿ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಒಡಿಶಾದ ಅನೇಕ ಪ್ರದೇಶಗಳಲ್ಲಿ ತಾಪಮಾನದಲ್ಲಿ 1-3°Cರಷ್ಟು ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತ ಪರಿಚಲನೆ ಪರಿಣಾಮ ಇಂದು (ಫೆಬ್ರವರಿ 12) ಅರುಣಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿಯೂ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ನಂತರ ಕ್ರಮೇಣ 2-4°C ಇಳಿಕೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಕನಿಷ್ಠ ತಾಪಮಾನವು ಮುಂದಿನ ಮೂರು ದಿನಗಳಲ್ಲಿ ಕ್ರಮೇಣ 2-3°C ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಬ್ರವರಿ 13ರ ವರೆಗೆ ಹಿಮಾಚಲ ಪ್ರದೇಶದ ಪ್ರತ್ಯೇಕ ಪ್ರದೇಶ, ಬಿಹಾರದ ಪ್ರತ್ಯೇಕ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆ ದಟ್ಟ ಮಂಜು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನದ ವಿರವ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗುತ್ತಲೇ ಇದೆ. ಇಂದು ಬೆಳಗ್ಗೆ 6 ಗಂಟೆ ವೇಳೆಗೆ AQI 269ರಷ್ಟಿದೆ. ಅಲ್ಲದೆ, ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ, ಮುಂದಿನ ಹಲವು ದಿನಗಳವರೆಗೆ ಚಳಿಗಾಳಿ ಜೊತೆಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications