Weather Forecast: ಮುಂದಿನ ಎರಡು ದಿನ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಇದೀಗ ಚಳಿಗಾಲದ ನಡುವೆಯೇ ಹಲವೆಡೆ ಮಳೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ (ಡಿಸೆಂಬರ್ 6) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ಅರುಣಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಹಿಮದ ನಡುವೆಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಪ್ರತ್ಯೇಕವಾದ ದಟ್ಟವಾದ ಮಂಜು ಕವಿಯಲಿದೆ ಎಂದು ತಿಳಿಸಿದೆ.
ಶನಿವಾರ (ಡಿಸೆಂಬರ್ 7) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳದ ಪ್ರತ್ಯೇಕ ಭಾಗಗಳಲ್ಲಿ ಮತ್ತು ಲಕ್ಷದ್ವೀಪದಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಅರುಣಾಚಲ ಪ್ರದೇಶದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದ ಉತ್ತರ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಮುಂದಿನ ಹಲವಾರು ದಿನಗಳವರೆಗೆ ದಕ್ಷಿಣ ಭಾರತದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರದಿಂದ ಸೋಮವಾರದವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಉತ್ತರ ಮತ್ತು ಮಧ್ಯ ಭಾರತದ ಪ್ರತ್ಯೇಕ ಭಾಗಗಳಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹಲವೆಡೆ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಅಲ್ಲದೆ, ಉತ್ತರ ಮತ್ತು ಮಧ್ಯ ಭಾರತದಲ್ಲಿ ತೀವ್ರ ತಾಪಮಾನ ಮತ್ತಷ್ಟು ಕುಸಿತ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications