IMD Weather Forecast: ಈ ಭಾಗಗಳಲ್ಲಿ ಜನವರಿ 22ರಿಂದ ಮುಂದಿನ ಎರಡು ದಿನ ಮಿಂಚು, ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೂ ಹಲವಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಎಲ್ಲೆಲ್ಲಿ ಮಳೆ?: ಚಂಡಮಾರುತದ ಪರಿಚಲನೆ ಪರಿಣಾಮ ದೇಶದ ಹಲವಡೆ ರಣಭೀಕರ ಚಳಿ ನಡುವೆಯೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 22 ಮತ್ತು 23ರಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶ, ಇಂದು ಹಿಮಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ, ಜನವರಿ 22ರಂದು ರಾಜಸ್ಥಾನ ಮತ್ತು ಪಶ್ಚಿಮ ಮಧ್ಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ದಟ್ಟ ಮಂಜು?: ಜನವರಿ 24ರ ವರೆಗೆ ಪೂರ್ವ ರಾಜಸ್ಥಾನ ಮತ್ತು ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟ ಮಂಜಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು,ಇದರಿಂದ ವಾಹನ ಸವಾರರಿಗೆ ಅಡೆತಡೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಜನವರಿ 22ರಿಂದ 24ರ ವರೆಗೆ ಬಿಹಾರ ಮತ್ತು ಒಡಿಶಾ, ಜನವರಿ 22 & 23ರಂದು ಪಶ್ಚಿಮ ಬಂಗಾಳ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಇದೇ ರೀಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 23ರಂದು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಜನವರಿ 22) ಬೆಳಿಗ್ಗೆ 6 ಗಂಟೆ ವೇಳೆಗೆ ದಟ್ಟ ಮಂಜು ಕವಿದಿದ್ದು, ಜೊತೆಗೆ ಗಾಳಿಯ ಗುಣಮಟ್ಟ ಹದಗೆಟ್ಟ ಕಾರಣ ವಾಹಣ ಸವಾರರಿಗೆ ಅಡಚಣೆಯಾದ ಘಟನೆ ನಡೆದಿದೆ. ಮತ್ತೊಮದೆಡೆ ರಾಷ್ಟ್ರ ರಾಜಧಾನಿಯ ಹಲವೆಡೆ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇರುವ ಪರಿಣಾಮ ಹವಾಮಾನ ಇಲಾಖೆ ಮುಂಜಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದೆಹಲಿಯ ವಿವಿಧ ಭಾಗಗಳಲ್ಲಿ ಬೆಳಗ್ಗೆ 6 ಗಂಟೆಗೆ ವೇಳಗೆ ಆನಂದ್ ವಿಹಾರ್, ಅಶೋಕ್ ವಿಹಾರ್, ಬವಾನಾ, ಜಹಾಂಗೀರ್‌ಪುರಿ, ನಜಾಫ್‌ಗಢ್, ಪಟಪರ್‌ಗಂಜ್, ವಿವೇಕ್ ವಿಹಾರ್, ಆರ್. ಕೆ.ಪುರಂ (279), ಶಾದಿಪುರದಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಳೆಯಾಗಿತ್ತು ಎಂದು ತಿಳಿದುಬಂದಿದೆ. ಇನ್ನು ಜನವರಿ 22 ಮತ್ತು 23ರಂದು ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಜನವರಿ 24ರಂದು ಮಳೆಯಾಗುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 22 ರಿಂದ 25°C ಮತ್ತು 10 ರಿಂದ 11 °C ವ್ಯಾಪ್ತಿಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications