IMD Weather Forecast: ಈ ಭಾಗಗಳಲ್ಲಿ ಎರಡು ದಿನ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಭಾರತದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೆ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ 2 ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಂಡಮಾರುತರ ಪರಿಚಲನೆ ಪರಿಣಾಮ ದೇಶದ ಹಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 29 ಮತ್ತು 30ರಂದು ಪಶ್ಚಿಮ ಹಿಮಾಲಯ ಪ್ರದೇಶದ ಅಲ್ಲಲ್ಲಿ ಪ್ರತ್ಯೇಕವಾಗಿ ದಟ್ಟ ಮಂಜಿನ ನಡುವೆಯೇ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದೇ ವೇಳೆ ಒಡಿಶಾ, ಅಸ್ಸಾಂ, ಮೇಘಾಲಯದ ಪ್ರತ್ಯೇಕ ಭಾಗಗಳಲ್ಲಿ, ಉತ್ತರಾಖಂಡ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ತ್ರಿಪುರದ ಪ್ರತ್ಯೇಕ ಭಾಗಗಳಲ್ಲಿ ಭೀಕರ ಚಳಿ ನಡುವೆ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ದಟ್ಟ ಮಂಜು?: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 26ರಿಂದ 28ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಜನವರಿ 26 & 27ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶೀತದ ವಾತಾವರಣ ಮುಂದುವರೆಯುವ ಮುನ್ಸೂಚನೆ: ಇಂದು (ಜನವರಿ 26) ಬಿಹಾರದ ಕೆಲವು ಭಾಗಗಳಲ್ಲಿ ಹೆಚ್ಚು ಶೀತ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನದ ವಿವರ: ನವದೆಹಲಿಯಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ವೇಳೆ ಸಾಧಾರಣ ಮಳೆಯಾಗಿದೆ. ಇಂದು (ಜನವರಿ 26) ಬೆಳಗ್ಗೆ ದಟ್ಟ ಭೀಕರ ಚಳಿ ನಡುವೆಯೇ ಮಂಜು ಕವಿದ ಪರಿಣಾಮ ವಾಹನ ಸವಾರರಿಗೆ ಅಡಚಣೆಯಾಗಿರುವ ಘಟನೆಗಳು ನಡೆದಿವೆ. ಈ ಭಾಗದಲ್ಲಿ ಮುಂದಿನ ಹಲವು ದಿನಗಳೆವರೆಗೂ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನ 1°C ವರೆಗೆ ಇಳಿಕೆಯಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 22 ರಿಂದ 24° C ಮತ್ತು 08 ರಿಂದ 09°C ವ್ಯಾಪ್ತಿಯಲ್ಲಿ ದಾಖಲಾಗಿದೆ. ಜನವರಿ 28ರ ವರೆಗೆ ಇದೇ ರೀತಿಯಾಗಿ ತಾಮಮಾನದಲ್ಲಿ ಏರಿಳಿತ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications