IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೂ ಕೆಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತದ ಹವಾಮಾನ ಇಲಾಖೆ ಪ್ರಕಾರ, ದೇಶದ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಭೀಕರ ಚಳಿ ಮುಂದುವರೆಯಲಿದೆ. ಇನ್ನೂ ಕೆಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Weather Forecast Heavy Rainfall Forecast in these states for Next 3 days from February 9

ಚಂಡಮಾರುತದ ಪರಿಚಲನೆ ಹಿನ್ನೆಲೆ ಫೆಬ್ರವರಿ 12ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ದಟ್ಟ ಮಂಜಿನ ನಡುವೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 11 ಮತ್ತು 12 ಸಿಕ್ಕಿಂ, ಈಶಾನ್ಯ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 12ರಂದು ಅರುಣಾಚಲ ಪ್ರದೇಶದಾದ್ಯಂತ ವ್ಯಾಪಕವಾಗಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಟ್ಟ ಮಂಜಿನ ಮುನ್ಸೂಚನೆ: ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರೆದಿತ್ತು. ಇದು ಫೆಬ್ರವರಿ 10ರ ಮುಂಜಾನೆಯವರೆಗೆ ಈ ರಾಜ್ಯಗಳಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶೀತಗಾಳಿ ಮುಂದುವರೆಯುವ ಮುನ್ಸೂಚನೆ: ಹಿಮಾಚಲ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಶೀತದ ಅಲೆಯ ಪರಿಸ್ಥಿತಿ ಮುಂದುವರೆದಿದ್ದರೆ, ಪಶ್ಚಿಮ ಮಧ್ಯಪ್ರದೇಶದಲ್ ಇದೇ ರೀತಿಯ ವಾತಾವರಣ ಮುಂದುವರೆದಿದೆ. ಹಾಗೆಯೇ ಮುಂದಿನ ಕೆಲವು ದಿನಗಳವರೆಗೆ ಉತ್ತರ ಭಾರತದಾದ್ಯಂತ ಪ್ರತ್ಯೇಕ ಪ್ರದೇಶಗಳಲ್ಲಿ ಇದೇ ರೀತಿಯ ವಾತಾವರಣ ಮುಂದುಬರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಮುಂದಿನ 4 ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ಹಾಗೆಯೇ ಇದೇ ವೇಳೆ ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಲಿದೆ ಎಂದು ತಿಳಿಸಿದೆ.

ನವದೆಹಲಿಯ ಹವಾಮಾನದ ವಿವರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಫೆಬ್ರವರಿ 9) ಬೆಳಗ್ಗೆ 6 ಗಂಟೆಗೆ ಒಟ್ಟಾರೆ AQI 191 ಎಂದು ದಾಖಲಾಗಿದೆ. ಫೆಬ್ರವರಿ 11ರ ವರೆಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಇನ್ನು ಬೆಳಗ್ಗೆ ಹಾಗೂ ಸಂಜೆ ವೇಳೆ ಚಳಿಯ ಪ್ರಮಾಣ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+