Weather Forecast: ಈ ಭಾಗಗಳಲ್ಲಿ ರಣಭೀಕರ ಚಳಿ ನಡುವೆಯೂ 3 ದಿನ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನು ಸೃಷ್ಟಿಸಿದೆ. ಅಷ್ಟು ಸಾಲದೆಂಬಂತೆ ಇದೀಗ ಭೀಕರ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 5ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ, ಜನವರಿ 5 ಮತ್ತು 6ರಂದು ಹಿಮಾಚಲ ಪ್ರದೇಶದಲ್ಲಿ ಹಿಮದ ಜೊತೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಜನವರಿ 6ರಂದು ಉತ್ತರಾಖಂಡದಲ್ಲಿ ಸಾಧಾರಣ ಮಳೆಯಾಗ ಸಾಧ್ಯತೆಯಿದೆ. ಇನ್ನು ಉತ್ತರ ಭಾರತದ ಕೆಲವು ಭಾಗಗಳಲ್ಲಿ ತಡರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಇಂದಿನಿಂದ ಮಂಜು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ಮೂರು ದಿನಗಳ ಕಾಲ ಪಶ್ಚಿಮ ಹಿಮಾಲಯ ಪ್ರದೇಶ, ವಾಯುವ್ಯ ಭಾರತ ಮತ್ತು ಮಧ್ಯ ಮತ್ತು ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನ 2-5 ಡಿಗ್ರಿ ಇಳಿಕೆಯಾಗುವ ಸಾಧ್ಯೆತದೆಯಿದೆ. ನಂತರ 2-3 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಲಿದೆ. ಇನ್ನು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ಇಂದು (ಜನವರಿ 05) ನವದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಬೆಳಗ್ಗೆ ಗಾಳಿ ವೇಗವು, 4 ಕಿಲೋ ಮೀಟರ್‌ಗಿಂತ ಕಡಿಮೆ ಇರಲಿದೆ. ಇಲ್ಲಿನ ಹೆಚ್ಚಿನ ಪ್ರದೇಶಗಳಲ್ಲಿ ದಟ್ಟ ಮಂಜು ಕವಿದಿರಲಿದೆ ಎಂದು ತಿಳಿಸಿದೆ.
ಮಧ್ಯಾಹ್ನದ ವೇಳೆಗೆ ಗಾಳಿಯು 8-10 ಕಿಲೋ ಮೀಟರ್‌ವರೆಗೆ ಬೀಸಲಿದ್ದು, ಸಂಜೆ ಮತ್ತು ರಾತ್ರಿ ವೇಳೆಗೆ 6 ಕಿಲೋ ಮೀಟರ್‌ಗಿಂತ ಕಡಿಮೆ ಇರುತ್ತದೆ. ಮಂಜು ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ, ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಹೆಚ್ಚು ಚಳಿ?: ಕಂಧಮಾಲ್ ಜಿಲ್ಲೆಯ ಉದಯಗಿರಿಯಲ್ಲಿ ತಾಪಮಾನವು 4.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದೆ. ಒಡಿಶಾದಲ್ಲಿ ಶನಿವಾರ ಹೆಚ್ಚು ಚಳಿಯ ಪ್ರಮಾಣ ಇತ್ತು. ಸೆಮಿಲಿಗುಡಾದಲ್ಲಿ 5.5 ಡಿಗ್ರಿ ಸೆಲ್ಸಿಯಸ್, ಫುಲ್ಬಾನಿಯಲ್ಲಿ 7.5 ಡಿಗ್ರಿ ಸೆಲ್ಸಿಯಸ್ ಮತ್ತು ರೂರ್ಕೆಲಾದಲ್ಲಿ 8.7 ಡಿಗ್ರಿ ಸೆಲ್ಸಿಯಸ್ ಸೇರಿದಂತೆ ಹತ್ತು ಸ್ಥಳಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಭುವನೇಶ್ವರದಲ್ಲಿ ಋತುವಿನ ಅತಿ ಕಡಿಮೆ ತಾಪಮಾನ 12.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕಟಕ್‌ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಆರೆಂಜ್ ಅಲರ್ಟ್: ಹಿಮಾಚಲ ಪ್ರದೇಶದ ಶಿಮ್ಲಾ, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ, ಕಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಇಂದು (ಜನವರಿ 05) ಭಾರೀ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಭಾನುವಾರ ಮತ್ತು ಸೋಮವಾರವೂ ಹಿಮಾಚಲ ಪ್ರದೇಶದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಘಲೇ ಶಿಮ್ಲಾದಲ್ಲಿ ಜನವರಿ 3, 2025ರಂದು ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಜನವರಿ 30, 2006ರಂದು 21.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ಈ ಬಾರಿ ಹಿಂದಿನ ದಾಖಲೆಯನ್ನು ಮೀರಿಸಿದೆ.
ಕಾಶ್ಮೀರದ ಹಾವಮಾನದ ವಿವರ: ಇನ್ನು ಇಂದು ಭಾರೀ ಹಿಮಪಾತದ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಪ್ರತ್ಯೇಕ ಸ್ಥಳಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಶ್ರೀನಗರದಲ್ಲಿ ಕನಿಷ್ಠ ಮೈನಸ್ 1.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಸ್ಕೀಯಿಂಗ್‌ಗೆ ಹೆಸರುವಾಸಿಯಾಗಿರುವ ಗುಲ್ಮಾರ್ಗ್‌ನಲ್ಲಿ ಮೈನಸ್ 2.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪಹಲ್ಗಾಮ್ ಮತ್ತು ಕೋನಿಬಾಲ್‌ನಲ್ಲಿ ಮೈನಸ್ 2.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಮತ್ತು ಖಾಜಿಗುಂಡ್‌ನಲ್ಲಿ ಮೈನಸ್ 6.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.












Click it and Unblock the Notifications