IMD Weather Forecast: ಈ ಭಾಗಗಳಲ್ಲಿ ಜನವರಿ 20ರಿಂದ ಮುಂದಿನ 3 ದಿನ ಭೀಕರ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಇನ್ನು ಹಲವು ದಿನಗಳ ಕಾಲ ದಟ್ಟ ಮಂಜಿನ ನಡುವೆ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ದಟ್ಟ ಮಂಜಿನ ನಡುವೆ ಚಳಿಯ ಪ್ರಮಾಣ ಹೆಚ್ಛಾಗುತ್ತಲೇ ಇದೆ. ಮತ್ತೊಂದೆಡೆ ದೇಶದ ಕೆಲವು ಭಾಗಗಳಲ್ಲಿ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ.

ಎಲ್ಲೆಲ್ಲಿ ಭಾರೀ ಮಳೆ?: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 20ರಿಂದ 23ರ ವರೆಗೆ ಹಲವು ಭಾಗಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. 22 ಮತ್ತು 23ರಂದು ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶ, ಇಂದು (ಜನವರಿ 20) ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಯವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ದಟ್ಟ ಮಂಜು?: ಜನವರಿ 20 ರಂದು ಉತ್ತರಾಖಂಡ, ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ, ಜನವರಿ 20 ಮತ್ತು 21ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಭಾಗಗಳಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಜನವರಿ 23ರ ವರೆಗೆ ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಲ್ಲಿ ಜನವರಿ 23ರ ವರೆಗೆ ಶೀತದ ವಾತವರಣ ಮುಂದುವೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 22 ಮತ್ತು 23ರಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ನವದೆಹಲಿಯ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು (ಜನವರಿ 20) ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನ 1°Cರ ವರೆಗೆ ಕುಸಿತವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 18 ರಿಂದ 21°C ಮತ್ತು 8ರಿಂದ 10°C ವ್ಯಾಪ್ತಿಯಲ್ಲಿ ದಾಖಲಾಗಿದೆ.












Click it and Unblock the Notifications