Weather Forecast: ಈ ಭಾಗಗಳಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ

Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ನಾಲ್ಕು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಚಲನೆ ಹಿನ್ನೆಲೆ ದೇಶದ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಮಳೆಯಾಗಲಿದೆ. ಇನ್ನೂ ಕೆಲವೆಡೆ ಚಳಿ ಜೊತೆಗೆ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಈಶಾನ್ಯ ಭಾರತ ಮತ್ತು ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Weather Forecast Heavy Rainfall Forecast in these states for Next 4 days from February 8

ಇಂದು (ಪೆಬ್ರವರಿ 08) ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನಲ್ಲಿ ಏರಿಳಿತ ಆಗಲಿದೆ. ಅಲ್ಲದೆ ಸಂಜೆ ವೇಳೆಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ಇದರಿಂದ ವಾಹನ ಸವಾರರು ಹಾಗೂ ನಿವಾಸಿಗಳಿಗೆ ಅಡಚಣೆ ಆಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

ಅಸ್ಸಾಂ, ಒಡಿಶಾ ಮತ್ತು ಮಹಾರಾಷ್ಟ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಲ್ಲಿ ಫೆಬ್ರವರಿ 10 ಮತ್ತು 11ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 8ರಿಂದ 12ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಲಘು ಮಳೆಯಾಗುವ ಸಾಧ್ಯತೆಯಿದೆ ಹಾಗೆಯೇ ಮಧ್ಯ ಭಾರತದ ಹಲವೆಡೆ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಬ್ರವರಿ 9ರ ವರೆಗೆ ಬೆಳಗಿನ ಜಾವ ಉತ್ತರ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ಹಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಇನ್ನು ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ಆದರೆ, ಈ ಬಾರಿ 2024ರ ಜೂನ್‌ ಆರಂಭ ಆಗುತ್ತಿದ್ದಂತೆ ಮುಂಗಾರು ಎಂಟ್ರಿ ಕೊಟ್ಟ ಕಾರಣ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕ ಕರ್ನಾಟಕವನ್ನು ಆವರಿಸಿದ್ದು, ನಂತರ ದೇಶಾದ್ಯಂತ ಆವರಿಸಿತು. ಇದರಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಾಹಸ ಮೂಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+