Weather Forecast: ಈ ಭಾಗಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಣಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಆದರೆ ಇದೀಗ ರಣಭೀಕರ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 4 ದಿನಗಳ ಕಾಲ ಈ ಭಾಗದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಳ ದೇಶದ ಹಲವೆಡೆ ಚಳಿ, ಮಂಜಿನ ಜೊತೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಜನವರಿ 4ರಿಂದ 6ರ ವರೆಗೆ ಜಮ್ಮು & ಕಾಶ್ಮೀರ, ಮುಜಫರಾಬಾದ್, ಗಿಲ್ಗಿಟ್, ಲಡಾಖ್ ಮತ್ತು ಬಾಲ್ಟಿಸ್ತಾನ್‌ನಲ್ಲಿ ವ್ಯಾಪಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಹೆಚ್ಚು ಚಳಿ?: ಇಂದು (ಜನವರಿ 2) ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ. ಅಲ್ಲದೆ, ಹರಿಯಾಣ, ಒಡಿಶಾ, ಪಂಜಾಬ್ ಮತ್ತು ಚಂಡೀಗಢದ ಪ್ರತ್ಯೇಕ ಪ್ರದೇಶಗಳಲ್ಲಿ ತಡರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟ ಮಂಜು ಕವಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ, ಜನವರಿ 3 ರವರೆಗೆ ರಾಜಸ್ಥಾನ, ಹಿಮಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಸಿಕ್ಕಿಂ ಮತ್ತು ಮಧ್ಯಪ್ರದೇಶ, ಜನವರಿ 6 ರವರೆಗೆ ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಅಸ್ಸಾಂ ಮತ್ತು ತ್ರಿಪುರಾದಲ್ಲಿ ಹೆಚ್ಚು ಚಳಿ ಜೊತೆ ಹಿಮ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಮಂಜಿನ ಜೊತೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಮತ್ತು ರಾತ್ರಿ ಸಮಯದಲ್ಲಿ ಮಂಜು ಮುಚ್ಚಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ದೇಶದ ಬಹುತೇಕ ಭಾಗಗಳಲ್ಲಿ ಬರದ ಛಾಯೆ ಆವರಿಸಿಯತ್ತು.
ಆದರೆ, ಈ ಬಾರಿ 2024ರ ಜೂನ್ ಆರಂಭ ಆಗುತ್ತಿದ್ದಂತೆ ಮುಂಗಾರು ಎಂಟ್ರಿ ಕೊಟ್ಟ ಕಾರಣ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು ಬಳಿಕ ಕರ್ನಾಟಕವನ್ನು ಆವರಿಸಿದ್ದು, ನಂತರ ದೇಶಾದ್ಯಂತ ಆವರಿಸಿತು. ಇದರಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಅನ್ನದಾತರ ಮುಖದಲ್ಲಿ ಮಂದಾಹಸ ಮೂಡಿದಂತಾಗಿದೆ.












Click it and Unblock the Notifications