Weather Forecast: ಈ ಭಾಗಗಳಲ್ಲಿ ಭೀಕರ ಚಳಿಯ ನಡುವೆಯೂ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Weather Forecast: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಅವಾಂತರಗಳೇ ಸೃಷ್ಟಿಯಾಗಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಡಿಸೆಂಬರ್ 8ರಿಂದ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಪಕ್ಷದ ಪ್ರದೇಶಗಳ ಮೇಲೆ ಚಂಡಮಾರುತದ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪಶ್ಚಿಮ ಹಿಮಾಲಯ ಪ್ರದೇಶದದಲ್ಲಿ ಹಿಮದ ಜೊತೆಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಅಲ್ಲದೆ, ಡಿಸೆಂಬರ್ 8 ರಿಂದ ಡಿಸೆಂಬರ್ 9 ರವರೆಗೆ ಪಂಜಾಬ್, ಚಂಡೀಗಢ ಮತ್ತು ಹರಿಯಾಣದ ಪ್ರತ್ಯೇಕ ಭಾಗಗಳಲ್ಲಿ ಲಘುವಾಗಿ ಮಳೆ ಬೀಳಲಿದೆ ಎಂದು ಮನ್ಸೂಚನೆ ನೀಡಿದೆ.

Weather Forecast Heavy rainfall forecast in these states for Next 5 days from December 7

ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಪರಿಣಾಮ ಇಂದು (ಡಿಸೆಂಬರ್ 7) ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದೆ. ಡಿಸೆಂಬರ್ 12ರ ವರೆಗೆ ವೇಳೆಗೆ ಶ್ರೀಲಂಕಾ-ತಮಿಳುನಾಡು ಕರಾವಳಿಯನ್ನು ಆವರಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ಸೂಚನೆ: ಡಿಸೆಂಬರ್ 11 ಮತ್ತು ಡಿಸೆಂಬರ್ 12ರಂದು ತಮಿಳುನಾಡಿದ ಪುದುಚೇರಿ, ಕರಾವಳಿ ತಮಿಳುನಾಡು ಕಾರೈಕಲ್‌ನಲ್ಲಿ ಗಾಳಿಯ ಪ್ರಮಾಣ ಹೆಚ್ಚಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 12 ರಂದು ಕರಾವಳಿ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೋಡ ಕವಿದ ವಾತಾವರಣ: ನಾಗಾಲ್ಯಾಂಡ್, ಮಿಜೋರಾಂ, ಮೇಘಾಲಯ, ತ್ರಿಪುರಾ, ಅಸ್ಸಾಂ ಮತ್ತು ಮಣಿಪುರದಲ್ಲಿ ಡಿಸೆಂಬರ್ 9ರ ವರೆಗೆ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಡಿಸೆಂಬರ್ 7 ರಿಂದ ಡಿಸೆಂಬರ್ 10ರ ವರೆಗೆ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌, ಉತ್ತರ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.

ಎಲ್ಲೆಲ್ಲಿ ದಟ್ಟ ಮಂಜು?: ಡಿಸೆಂಬರ್ 8 ರಿಂದ ಡಿಸೆಂಬರ್ 10ರ ವರೆಗೆ ಬಿಹಾರ , ಸಿಕ್ಕಿಂ, ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂಜಾನೆ ಸಮಯದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಹಾಗೆಯೇ ಹಿಮಾಚಲ ಪ್ರದೇಶದಲ್ಲೂ ಡಿಸೆಂಬರ್ 10ರಿಂದ ಡಿಸೆಂಬರ್ 11ರ ಮುಂಜಾನೆಯ ಸಮಯದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಉತ್ತರ ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿ ಡಿಸೆಂಬರ್ 10 ರಿಂದ 12ರ ವರೆಗೆ ಶೀತದ ವಾತಾವರಣ ಇರಲಿದೆ. ಇನ್ನು ನವದೆಹಲಿಯಲ್ಲಿ ಬೆಳಗ್ಗೆ ಮತ್ತು ರಾತ್ರಿ ವೇಳೆಗೆ ಮಂಜಿನ ಜೊತೆ ಹೊಗೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಇದರ ಜೊತೆ ಮಂಜು ಹೆಚ್ಚುತ್ತಿರುವುದರಿಂದ ವಾಹನ ಸವಾರರು, ಜನರು ಪರದಾಡಿದ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+