Weather Forecast: ಈ ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Weather Forecast: ಇದೀಗ ಭೀಕರ ಚಳಿ ನಡುವೆಯೂ ದೇಶದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಇಂದಿನಿಂದ 5 ದಿನಗಳ ಕಾಲ ಈ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಹಾಗೂ ಎಲ್ಲೆಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಮುಂದಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತಾಪಮಾನ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗಲಿದೆ. ಈ ಮೂಲಕ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಈ ನಡುವೆಯೆ ಕೆಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸಚನೆ ನೀಡಿದೆ. ಪಶ್ಚಿಮ ರಾಜಸ್ಥಾನದಲ್ಲಿ ಇಂದು (ಜನವರಿ 8) ಶೀತದ ಪ್ರಮಾಣ ಹೆಚ್ಚಿರಲಿದೆ. ಅಲ್ಲದೆ, ಇಂದಿನಿಂದ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ತಿಳಿಸಿದೆ.

Weather Forecast Heavy rainfall forecast in these states for Next Five days till January 08

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಇಂದು (ಜನವರಿ 08) ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು, ಮಿಂಚು ಸಹಿತ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳ ಪ್ರತ್ಯೇಕ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜನವರಿ 10 ರಿಂದ 12ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಹಲವೆಡೆ ದಟ್ಟ ಮಂಜಿನ ನಡುವೆಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಜನವರಿ 8 ರಿಂದ 10ರ ವರೆಗೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದಲ್ಲಿ ತಡರಾತ್ರಿ ಮತ್ತು ಮುಂಜಾನೆ ದಟ್ಟ ಮಂಜು ಕವಿಯುವ ಮುನ್ಸೂಚನೆ ನೀಡಿದೆ. ಪರಿಣಾಮ ಈ ಭಾಗದಲ್ಲು ರೈಲು ಮತ್ತು ರಸ್ತೆ ಸಂಚಾರದಲ್ಲಿ ಅಡಚಣೆಯಾಗುವ ಸಾಧ್ಯತೆಯಿದೆ.

ಜನವರಿ 10 ಮತ್ತು 11ರಂದು ಬಿಹಾರದ ವಿವಿಧ ಭಾಗಗಳಲ್ಲಿ ಹೆಚ್ಚು ಮಂಜು ಇರಲಿದೆ. ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಒಡಿಶಾ, ಜನವರಿ 10 ರವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಜನವರಿ 8 ಮತ್ತು 9ರಂದು ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಪ್ರಮುಖ ಸಂದೇಶ: ಚಂಡಮಾರುತ ಪರಿಣಾಮ ಜನರು 9ರಂದು ದಕ್ಷಿಣ ಬಂಗಾಳಕೊಲ್ಲಿಯ ಉತ್ತರ ಭಾಗಗಳಿಗೆ ಮತ್ತು ಜನವರಿ 10ರಂದು ನೈಋತ್ಯ ಬಂಗಾಳ ಕೊಲ್ಲಿ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಅಕ್ಕಪಕ್ಕದ ಭಾಗಗಳಿಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ಅಂದರೆ ಜನವರಿ 7ರ ಬೆಳಗ್ಗೆ 6 ಗಂಟೆಗೆ ಗಾಳಿಯ ಗುಣ್ಣಮಟ್ಟ ಅತ್ಯಂತ ಕಳಪೆಯಾಗಿದ್ದು, ಇದರಿಂದ ಇಲ್ಲಿನ ಜನರು ಹಾಗೂ ವಾಹನ ಸವಾರರು ಕಂಗಾಲಾಗಿರುವ ನಡೆದಿವೆ. ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನವು 1°C ಯಿಂದ 2 ° C ವರೆಗೆ ಕುಸಿದಿದೆ ಎಂದು ತಿಳಿದುಬಂದಿದೆ. ಇಂದು ಕೂಡ ತಾಪಮಾನದಲ್ಲಿ ಏರುಪೇರಾಗಲಿದ್ದು, ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+