IMD Weather Forecast: ಈ ಭಾಗಗಳಲ್ಲಿ ಜನವರಿ 19ರಿಂದ ಮುಂದಿನ ಒಂದು ವಾರ ಭೀಕರ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ಇದರ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶಾದ್ಯಂತ ಮುಂದಿನ ಹಲವು ದಿನಗಳ ಕಾಲ ಹವಮಾನದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಹಲವೆಡೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಮಂದುವರೆದರೆ, ಕೆಲವೆಡೆ ವಾಯುಭಾರ ಕುತಿತ ಪರಿಣಾಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Forecast Heavy rainfall forecast in these states for Next one week from January 19

ಅದರಲ್ಲೂ ವಿಶೇಷವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಅಲ್ಲಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಜನವರಿ 21ರವ ರೆಗೆ ದಟ್ಟ ಮಂಜಿನ ಜೊತೆ ಜಿನುಗು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ದಟ್ಟ ಮಂಜು ಕವಿಯುವ ಮುನ್ಸೂಚನೆ ಇದ್ದು, ಪರಿಣಾಮ ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆ ಹೆಚ್ಚಿದೆ ಅಂತಲೂ ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಜನವರಿ 21 ರಿಂದ 23ರ ವರೆಗೆ ವಾಯುವ್ಯ ಭಾರತದ ಹಲವು ಭಾಗಗಳ ಮೇಲೆ ಚಂಡಮಾರುತದ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಣಾಮ ಮುಂದಿನ ವಾರವಿಡೀ ಪಂಜಾಬ್, ಹರಿಯಾಣ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಚಂಡೀಗಢದಲ್ಲಿ ಭೀಕರ ಚಳಿ ನಡುವೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇಂದು (ಜನವರಿ 19) ಕರಾವಳಿಯ ತಮಿಳುನಾಡು ಮತ್ತು ದಕ್ಷಿಣ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಎಲ್ಲೆಲ್ಲಿ ದಟ್ಟ ಮಂಜು?: ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದ ಭಾಗಗಳಲ್ಲಿ ಮುಂದಿನ ಹಲವು ದಿನಗಳವರೆಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಇಂದು (ಜನವರಿ 19) ಉತ್ತರಾಖಂಡ, ಬಿಹಾರ ಮತ್ತು ಒಡಿಶಾದ ಪ್ರತ್ಯೇಕ ಭಾಗಗಳಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆ ಇದೇ ರೀತಿಯ ವಾತಾವರಣ ಮುಂದುರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 19 ಮತ್ತು 20ರಂದು ಪೂರ್ವ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ವಿಶೇಷವಾಗಿ ಜನವರಿ 21 ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜನವರಿ 22ರ ವರೆಗೆ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಶೀತದ ವಾತಾವರಣ ಮುಂದುವರೆಯಲಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ (ಜನವರಿ 18) ಬೆಳಗ್ಗೆ ಗಾಳಿಯ ಗುಣಮಟ್ಟವು ತೀವ್ರ ಕಳಪೆಯಾಗಿದ್ದು, ಇದರಿಂದ ಇಲ್ಲಿನ ನಿವಾಸಿಗಳು ಹಾಗೂ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟು ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಇಂದು (ಜನವರಿ 19) ಕೂಡ ನವದೆಹಲಿಯಲ್ಲಿ ದಟ್ಟ ಮಂಜು ಕವಿದಿದ್ದು, ಜೊತೆಗೆ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಟ್ಟ ಪರಿಣಾಮ ಇಲ್ಲಿನ ಜನ ಹಾಗೂ ವಾಹನ ಸವಾರರಿಗೆ ಅಡಚಣೆಯಾದ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+