weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
Rain Alert: ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜು ಮತ್ತು ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಇದೀಗ ದೇಶದ ಹಲವೆಡೆ ಹಲವೆಡೆ ಭೀಕರ ಚಳಿ ನಡುವೆಯೂ ಮಳೆರಾಯನ ಆರ್ಭಟ ಮುಂದುವರೆದಿದೆ. ಜನವರಿ 11 ಮತ್ತು 12 ರಂದು ವಾಯುವ್ಯ ಭಾರತದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಮುಂದಿನ 4-5 ದಿನಗಳ ಕಾಳ ಗಂಗಾ ಬಯಲು ಪ್ರದೇಶದಾದ್ಯಂತ ದಟ್ಟವಾದ ಮಂಜು ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯೆಯಿದೆ ಎಂದು ತಿಳಿಸಿದೆ.

ಗುಡುಗು ಸಹಿತ ಆಲಿಕಲ್ಲು ಮಳೆ ಎಚ್ಚರಿಕೆ: ಜನವರಿ 11ರಂದು ಪಶ್ಚಿಮ ರಾಜಸ್ಥಾನ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಚಂಡೀಗಢ, ಪೂರ್ವ ರಾಜಸ್ಥಾನ, ಉತ್ತರಾಖಂಡ, ಗಿಲ್ಗಿಟ್, ದಕ್ಷಿಣ ಹರಿಯಾಣ, ಬಾಲ್ಟಿಸ್ತಾನ್, ಪಶ್ಚಿಮ ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜನವರಿ 12 ರಂದು ಪೂರ್ವ ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶದಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಆಗ್ನೇಯ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾತಾವರಣವಿದ್ದು, ಪರಿಣಾಮ ಈಶಾನ್ಯ ಮತ್ತು ದಕ್ಷಿಣ ಭಾರತದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 12 ರಂದು ತಮಿಳುನಾರಿನ ಕಾರೈಕಲ್ ಮತ್ತು ಪುದುಚೇರಿಯಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಬೀಳಲಿದೆ. ಜನವರಿ 13 ಮತ್ತು 14ರಂದು ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶ & ಜನವರಿ 13ರಂದು ಕೇರಳ, ಯಾನಂ, ರಾಯಲಸೀಮಾ, ಮಾಹೆ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಟ್ಟ ಮಂಜು & ಭೀಕರ ಚಳಿ ಎಚ್ಚರಿಕೆ: ಜನವರಿ 12ರಂದು ಹಿಮಾಚಲ ಪ್ರದೇಶದಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜನವರಿ 11ರಿಂದ 15ರ ವರೆಗೆ ಬಿಹಾರ, ಚಂಡೀಗಢ, ಹರಿಯಾಣ, ಪೂರ್ವ ಉತ್ತರ ಪ್ರದೇಶ, ಪಂಜಾಬ್, ಪೂರ್ವ ರಾಜಸ್ಥಾನ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳದಲ್ಲಿ ರಾತ್ರಿ & ಮುಂಜಾನೆ ವೇಳೆ ದಟ್ಟ ಮಂಜು ಕವಿಯುವ ಸಾಧ್ಯತೆ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications