IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಈ ಭಾಗಗಳಲ್ಲಿ ಮುಂದಿನ 2 ದಿನ ಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಇದರ ನಡುವೆಯೂ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವೆಡೆ ಮಳೆಯಾಗುಗುತ್ತಿದೆ. ಹಾಗೆಯೇ ಮುಂದಿನ 2 ದಿನ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 12ರಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿ ವಾಹನ ಸವಾರರು ಪರದಾಡಿದ ಘಟನೆಗಳು ನಡೆದವು. ಇನ್ನು ಮುಂದಿನ ದಿನಗಳಲ್ಲಿ ಈ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಜನವರಿ 13 ರಿಂದ 15 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ದಟ್ಟ ಮಂಜು ಇರಲಿದ್ದು, ಇದರಿಣದ ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಲಿಕಲ್ಲು ಮಳೆ ಎಚ್ಚರಿಕೆ: ಇಂದು (ಜನವರಿ 13) ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯ ಪರಿಣಾಮ, ಜನವರಿ 15ರ ವರೆಗೆ ತಮಿಳುನಾರಿನ ಪುದುಚೇರಿ, ಕಾರೈಕಲ್ ಜನವರಿ 14 ರವರೆಗೆ ಕರಾವಳಿ ಆಂಧ್ರಪ್ರದೇಶದ ಹಲವೆಡೆ ಮತ್ತು ಕೇರಳದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
2025 ರ ಜನವರಿ 14 ರ ರಾತ್ರಿಯಿಂದ ಮತ್ತೊಂದು ತಾಜಾ ಪಾಶ್ಚಿಮಾತ್ಯ ಅಡಚಣೆಯು ವಾಯುವ್ಯ ಭಾರತದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಅದರ ಪ್ರಭಾವದ ಅಡಿಯಲ್ಲಿ, ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಜನವರಿ 15 ರಿಂದ ಜನವರಿ 15 ರವರೆಗೆ ಪ್ರತ್ಯೇಕವಾದ ಮಳೆ/ಹಿಮಪಾತದ ಚಟುವಟಿಕೆಯ ಸಾಧ್ಯತೆಯಿದೆ. 18. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದ ಮೇಲೆ ಪ್ರತ್ಯೇಕವಾದ ಮಳೆಯ ಚಟುವಟಿಕೆಯನ್ನು ಜನವರಿಯಲ್ಲಿ ನಿರೀಕ್ಷಿಸಲಾಗಿದೆ 15 ಮತ್ತು 16.
ಹವಾಮಾನ ಇಲಾಖೆ ಪ್ರಕಾರ, ಇಂದು (ಜನವರಿ 13) ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನ ಸೇರಿದಂತೆ ಉತ್ತರದ ಭಾರತದ ಪ್ರತ್ಯೇಕ ಭಾಗಗಲ್ಲಿ ತಾಪಮಾನದ ಪ್ರಮಾಣ ಕಡಿಮೆಯಾಗಲಿದ್ದು, ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಚಂಡಮಾರುತದ ಚರಿಚಲನೆ ಹಿನ್ನೆಲೆ ಇಂದು (ಜನವರಿ 13) ದಕ್ಷಿಣ ಶ್ರೀಲಂಕಾದ ಕರಾವಳಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿ, ಜನವರಿ 16ರ ವರೆಗೆ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶಕ್ಕೆ ಮೀನುಗಾರರು ತೆರಳದಂತೆ ಎಚ್ಚರಿಕೆ ಸಂದೇಶ ರವಾನಿಸಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ಇಂದು (ಜನವರಿ 13) ಬೆಳಗ್ಗೆ ನವದೆಹಲಿಯ ಹಲವೆಡೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಬೆಳಗ್ಗೆ 6 ಗಂಟೆಗೆ ಗಾಳಿಯ ಗುಣಮಟ್ಟ ತೀವ್ರ ಕಳೆಪೆಯಿಂದ ಕೂಡಿದ ಪರಿಣಾಮ ವಾಹನ ಸವಾರರು ಇಲ್ಲಿನ ಜನರು ಬೇಸತ್ತು ಹೋಗಿದ್ದಾರೆ. ಹಾಗೆಯೇ ಜನವರಿ 15ರ ವರೆಗೂ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications