IMD Weather Forecast: ಈ ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಚಳಿ ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರತದ ಹವಾಮಾನ ಇಲಾಖೆ ಪ್ರಕಾರ, ಪಂಜಾಬ್ ಮತ್ತು ಅದರ ನೆರೆಯ ಪ್ರದೇದಲ್ಲಿ ಇಂದು (ಜನವರಿ 12) ಬೆಳಗ್ಗೆ ದಟ್ಟವಾದ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಪರಿಣಾಮ ಜನರು ಹಾಗೂ ವಾಹ ಸವಾರರು ಪರದಾಡಿದ ಘಟನೆ ನಡೆದಿದೆ. ಇನ್ನು ಇಂದು (ಜನವರಿ 1) ರಾಜಸ್ಥಾನ ಮತ್ತು ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ದಟ್ಟ ಮಂಜಿನ ನಡುವೆ ಭೀಕರ ಚಳಿ ಮುಂದುವರೆಯಲಿದೆ ಎಂದು ತಿಳಿಸಿದೆ.

ಜನವರಿ 14 ರಿಂದ 16ರ ವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆಯಿದೆ. ಜನವರಿ 16ರಂದು ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ಉತ್ತರ ಪ್ರದೇಶ, ಜನವರಿ 13ರಿಂದ 15ರ ವರೆಗೆ ಬಿಹಾರ, ಅಸ್ಸಾಂ, ಛತ್ತೀಸ್‌ಗಢ, ಉಪ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಲಿಕಲ್ಲು ಮಳೆ ಎಚ್ಚರಿಕೆ: ಇಂದು (ಜನವರಿ 12) ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬಂಗಾಳಕೊಲ್ಲಿನ ಚಂಡಮಾರುತದ ಪರಿಚಲನೆ ಪರಿಣಾಮ, ಮುಂದಿನ 5 ದಿನಗಳ ಕಾಲ ತಮಿಳುನಾರಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜನವರಿ 14ರ ವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮತ್ತು ಕೇರಳದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜನವರಿ 14ರ ರಾತ್ರಿಯಿಂದ ವಾಯುವ್ಯ ಭಾರತದ ಮೇಲೆ ಚಂಡಮಾರುತದ ಪರಿಣಾಮ ಬೀರುವ ಸಾಧ್ಯತೆಯಿದೆ. ಜನವರಿ 15ರಿಂದ 17ರ ವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ಉತ್ತರದ ಭಾರತದ ಪ್ರತ್ಯೇಕ ಭಾಗಗಳಲ್ಲಿ ತಾಪಮಾನ ಕಡಿಮೆಯಾಗಲಿದ್ದು, ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ನವದೆಹಲಿಯ ಹವಾಮಾನದ ವಿವರ: ಇಂದು (ಜನವರಿ 12) ಬೆಳಗ್ಗೆ ರಾಷ್ಟ್ರ ರಾಜಧಾನಿ ನವದೆಹಲಿಯ ವಿವಿಧ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಬೆಳಿಗ್ಗೆಯೇ ಗಾಳಿಯ ಗುಣಮಟ್ಟವೂ ಕೂಡ ತೀವ್ರ ಕಳಪೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಕನಿಷ್ಠ ತಾಪಮಾನವು 02°C ವರೆಗೆ ಏರಿಕೆಯಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 16 ರಿಂದ 18 °C ಮತ್ತು 8 ರಿಂದ 9°C ವ್ಯಾಪ್ತಿಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications