Weather Forecast: ಈ ಭಾಗಗಳಲ್ಲಿ ಮುಂದಿನ 2 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇದೀಗ ಫೆಂಗಲ್ ಚಂಡಮಾರುತದ ಪರಿಣಾಮ ಚಳಿಯ ನಡುವೆಯೂ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನು ಮುಂದಿನ 2 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಸಡಿಲು ಸಹಿತ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಡಿಸೆಂಬರ್ 2) ಕೇರಳದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಇದೇ ವೇಳೆ ತಮಿಳುನಾಡು, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಹಿಮದ ನಡುವೆಯೂ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತೆಲಂಗಾಣ, ಉತ್ತರ ಒಳನಾಡಿದ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಇದೇ ರೀತಿಯ ಹವಾಮಾನ ಇರಲಿದೆ ಎಂದು ತಿಳಿಸಿದೆ. ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಹಿಮದ ಜೊತೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.
ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾಗಿ ಅಲಲ್ಲಿ ಮಳೆಯಾಗುವ ನಿರೀಕ್ಷಿಯಿದೆ. ಮಧ್ಯ ಭಾರತದ ಪ್ರತ್ಯೇಕ ಭಾಗಗಳಲ್ಲಿ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ತಿಳಿಸಿದೆ.
ಮಂಗಳವಾರ (ಡಿಸೆಂಬರ್ 3) ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಹಿಮದ ನಡುವೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಒಡಿಶಾ, ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಛತ್ತೀಸ್‌ಗಢ ಮತ್ತು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಹಲವಾರು ದಿನಗಳವರೆಗೆ ಮಧ್ಯ ಭಾರತದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ. ಕಳೆದ ವಾರ ದಕ್ಷಿಣ ಭಾರತಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಮುಂದಿನ ದಿನಗಳಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಅಥವಾ ಹೆಚ್ಚಳವೂ ಆಗಬಹುದು ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications