IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಈ ಭಾಗಗಳಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ರಣಭೀಕರ ಚಳಿ ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ. ಜನನವರಿ 18 ಮತ್ತು 19ರಂದು ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಜನವರಿ 19ರಂದು ಕೇರಳ ಮತ್ತು ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು (ಜನವರಿ 16) ಬೆಳಗ್ಗೆ ಭೀಕರ ಚಳಿ ನಡುವೆಯೂ ನವದೆಹಲಿಯ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ತಿಳಿದುಬಂದಿದೆ.

Weather Forecast Heavy rainfall forecast in these states for Next three days from January 16

ಇಂದು ನಿಕೋಬಾರ್ ದ್ವೀಪದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಉತ್ತರಾಖಂಡ, ಹಿಮಾಚಲ ಪ್ರದೇಶದ ಕೆಲವೆಡೆ ಚದುರಿದದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗದಲ್ಲಿ ಹಿಮ ಹೆಚ್ಚಿರಲಿದ್ದು ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆ ಹಚ್ಚಿದೆ ಎಂದು ಎಚ್ಚರಿಕೆ ಸಂದೇವನ್ನು ರವಾನಿಸಿದೆ.

ಇಂದಿನಿಂದ ಹಲವು ದಿನಗಳ ಕಾಲ ಉತ್ತರದ ರಾಜ್ಯಗಳಾದ ಪಂಜಾಬ್, ಹರಿಯಾಣದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಚಂಡೀಗಢ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಜನವರಿ 18ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಟ್ಟ ಮಂಜು ಕವಿಯುವ ಎಚ್ಚರಿಕೆ: ಜನವರಿ 15ರಂದು ದೇಶದ ವಿವಿಧ ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸಿದ್ದು, ಈ ಅಡಚಣೆಯಿಂದ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಇಂದು (ಜನವರಿ 16) ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಜನವರಿ 20 ರವರೆಗೆ ಹಿಮಾಚಲ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಶೀತ ಹೆಚ್ಚಿರಲಿದೆ?: ಜನವರಿ 16 ರಂದು ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಶೀತದ ಪ್ರಮಾಣ ಹೆಚ್ಛಾಗುವ ಸಾಧ್ಯತೆಯಿದೆ. ಇನ್ನು ಜನವರಿ 16 ಮತ್ತು 17ರಂದು ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಪ್ರತ್ಯೇಕ ಭಾಗಗಳಲ್ಲಿ ನೆಲದ ಹಿಮದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ದೆಹಲಿಯಲ್ಲಿ ಇಂದು (ಜನವರಿ 16) ಬೆಳಗ್ಗೆ 6 ಗಂಟೆಗೆ 356ರ ವಾಯು ಗುಣಮಟ್ಟ ಸೂಚ್ಯಂಕದೊಂದಿಗೆ (AQI) ಗಾಳಿಯ ಗುಣಮಟ್ಟ ತೀವ್ರ ಕಳಪೆಯಾಗಿತ್ತು. ಈ ನಡುವೆಯೂ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ವರದಿಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 18 ರಿಂದ 21°C ಮತ್ತು 6 ರಿಂದ 7°C ವ್ಯಾಪ್ತಿಯಲ್ಲಿ ದಾಖಲಾಗಿದೆ. ಇನ್ನು ಜನವರಿ 17 ಮತ್ತು 18ರಂದು ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+