IMD Weather Forecast: ಫೆಬ್ರವರಿ 1ರಿಂದ 4ರ ವರೆಗೆ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಫೆಬ್ರವರಿ 1ರಿಂದ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದ ಹಲವೆಡೆ ರಣಭೀಕರ ಚಳಿ ನಡುವೆಯೂ ಕೆಲವು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ 1ರಿಂದ 4ರ ವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹೀಗೆ ಉತ್ತರ ಭಾರತದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಫೆಬ್ರವರಿ 1ರಿಂದ 4ರ ವರೆಗೆ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ಅಲ್ಲಲ್ಲಿ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಚಂಡಮಾರುತದ ಪರಿಚಲನೆ ಪರಿಣಾಮ ಜನವರಿ 30ರಿಂದ ಫೆಬ್ರವರಿ 1ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ದಟ್ಟ ಮಂಜು?: ಜನವರಿ 31ರ ವರೆಗೆ ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದ ಪ್ರತ್ಯೇಕ ಭಾಗಗಳಲ್ಲಿ, ಕರಾವಳಿ ಒಡಿಶಾದಲ್ಲಿಯೂ ಇದೇ ರೀತಿ ವಾತಾವರಣ ಇರಲಿದೆ. ಫೆಬ್ರವರಿ 1ರ ವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಬಿಹಾರದಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ಈಗಾಗಲೇ ನವದೆಹಲಿಯಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ ಕಳಪೆಯಾಗುತ್ತಿದ್ದು, ವಾಹನ ಸವಾರರಿಗೆ ಅಡಚಣೆ ಉಂಟಾಗಿ ಪರದಾಡಿದ ಘಟನೆಗಳು ನಡೆದಿವೆ. ಇಂದು (ಜನವರಿ 30) ಕೂಡ ಗಾಳಿಯ ಗುಣಮಟ್ಟ ತೀವ್ರ ಕಳಪೆಯಿಂದ ಕೂಡಿದ್ದು, ಪರಿಣಾಮ ಅಲ್ಲಿನ ಸಾರ್ವಜನಿಕರು, ವಾಹನ ಸವಾರರು ಪರದಾಡಿದ ಘಟನೆ ನಡೆಯಿತು ಎಂದು ತಿಳಿದುಬಂದಿದೆ. ಅಲ್ಲದೆ, ಫೆಬ್ರವರಿ 1ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications