IMD Weather Forecast: ಈ ಭಾಗಗಳಲ್ಲಿ ಜನವರಿ 18 & 19ರಂದು ಭಾರೀ ಮಳೆ ಮುನ್ಸೂಚನೆ: IMD
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ರಣಭೀಕರ ಚಳಿ ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತದ ಹವಾಮಾನ ಇಲಾಖೆ ಪ್ರಕಾರನ, ಇಂದು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭೀಕರ ಮಂಜಿನ ವಾತಾವರಣ ಮುಂದುವರೆಯಲಿದೆ. ತಮಿಳುನಾಡು ಮತ್ತು ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಭಾರತದ ಬಹುತೇಜ ಭಾಗಗಳಲ್ಲಿ ದಟ್ಟ ಮಂಜಿನ ನಡುವೆ ಭೀಕರ ಚಳಿ ಮುಂದುವರೆಯವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಜನವರಿ 22ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ದಟ್ಟ ಮಂಜಿನ ನಡುವೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಜನವರಿ 21ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಅಲ್ಲಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
* ಉತ್ತರ ಭಾರತದ ಹಲವೆಡೆಯು ಮುಂದಿನ ಹಲವು ದಿನಗಳವರೆಗೆ ಸಾಧಾರಣ ಮಳೆಯಾಗುವ ಸಾಧ್ಯೆಯಿದ ಎಂದು ಮುನ್ಸೂಚನೆ ನೀಡಿದೆ. ಜನವರಿ 21ರಿಂದ 23ರ ವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಿದೆ.
* ದಕ್ಷಿಣ ಭಾರತದ ಹವಾಮಾನ ಮುನ್ಸೂಚನೆ: ಜನವರಿ 18 ಮತ್ತು 19 ರಂದು ತಮಿಳುನಾರಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜನವರಿ 19ರಂದು ಕೇರಳದ ಕೆಲವು ಭಾಗಗಳಲ್ಲಿ ಇದೇ ರೀತಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಹಲವು ದಿನಗಳ ಕಾಲ ವಾಯುವ್ಯ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಾಗಲೇ ಕೆಲವೇ ಪ್ರದೇಶಗಳಲ್ಲಿ ಸ್ವಲ್ಪ ಏರಿಕೆಯಾಗಿದೆ. ಮುಂದಿನ ಹಲವು ದಿನಗಳ ಕಾಲ ಹಿಮಾಚಲ ಪ್ರದೇಶದಂತಹ ಸ್ಥಳಗಳಲ್ಲಿ ದಟ್ಟ ಮಂಜಿನ ನಡುವೆ ಶೀತ ಗಾಳಿ ಮುಂದುಬರೆಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟ ಮಂಜು ಇರಲಿದ್ದು, ವಾಹನ ಸವಾರರಿಗೆ ಅಡಚಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಗುಜರಾತ್‌ನಲ್ಲಿ ಮುಂದಿನ 48 ಗಂಟೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಬಳಿಕ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಮಹಾರಾಷ್ಟ್ರದಲ್ಲಿ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಜನವರಿ 18 ಮತ್ತು 19 ರಂದು ಹಿಮಾಚಲ ಪ್ರದೇಶದ ಪ್ರತ್ಯೇಕವಾದ ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ವೇಳೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ರಾತ್ರಿ ಮತ್ತು ಮುಂಜಾನೆ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಜನವರಿ 20ರ ವರೆಗೆ ಹಿಮಾಚಲ ಪ್ರದೇಶದಲ್ಲಿ ಇದೇ ರೀತಿ ವಾಯಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನದ ವಿವರ: ಜನವರಿ 18-20ರ ವರೆಗೆ ನವದೆಹಲಿಯ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟ ಮಂಜು ಕವಿದ ವಾತಾವರಣ ಇದರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications