Weather Forecast: ಡಿಸೆಂಬರ್ 16ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

Weather Forecast: ಇದೀಗ ರಣಭೀಕರ ಚಳಿಯ ನಡುವೆಯೂ ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 16ರ ವರೆಗೆ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯುದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿತನ್ನು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾ ಇಲಾಖೆ ಪ್ರಕಾರ, ಬುಧವಾರ (ಡಿಸೆಂಬರ್ 11) ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಕೇರಳ, ಕರಾವಳಿ ಆಂಧ್ರಪ್ರದೇಶದ ಹಲವೆಡೆ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲು ಭಾರೀ ಮಳೆಯಾಗವ ಸಾಧ್ಯತೆಯಿದೆ.

Weather Forecast Heavy rainfall forecast in these states till December 16

ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ವೇಳೆ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ರಾಜಸ್ಥಾನದಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ (ಡಿಸೆಂಬರ್ 12) ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕ, ಕರಾವಳಿ ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬೆಳಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದ್ದು, ಮುಂದಿನ 24 ಗಂಟೆಗಳಲ್ಲಿ ಇದು ಶ್ರೀಲಂಕಾ, ತಮಿಳುನಾಡಿನ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಡಿಸೆಂಬರ್ 11ರಿಂದ 16ರ ವರೆಗೆ ದಕ್ಷಿಣ ಭಾರತದ ಪ್ರತ್ಯೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 11-12ರ ವರೆಗೆ ಕರಾವಳಿ ಆಂಧ್ರಪ್ರದೇಶ, ಡಿಸೆಂಬರ್ 12ರಿಂದ 16ರ ವರೆಗೆ ಕೇರಳದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 12-13ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಡಿಸೆಂಬರ್ 13ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 14ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ, ಡಿಸೆಂಬರ್ 11-14ರ ವರೆಗೆ ತಮಿಳುನಾಡಿನ ಪುದುಚೇರಿ, ಕಾರೈಕಾಲ್, ಡಿಸೆಂಬರ್ 11-13ರ ವರೆಗೆ ಕೇರಳ, ಕರಾವಳಿ ಆಂಧ್ರಪ್ರದೇಶ, ಡಿಸೆಂಬರ್ 13ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+