Weather Forecast: ಈ ಭಾಗಗಳಲ್ಲಿ ಡಿಸೆಂಬರ್ 20ರ ವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Cyclone Forecast: ಇದೀಗ ಭೀಕರ ಚಳಿ ನಡುವೆಯೂ ದೇಶದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಡಿಸೆಂಬರ್ 20ರ ವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು (ಡಿಸೆಂಬರ್ 18) ತಮಿಳುನಾಡು, ಕರಾವಳಿ ಆಂಧ್ರ ಪ್ರದೇಶ, ಕೇರಳ ಮತ್ತು ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಈ ವಾರ ಪೂರ್ತಿ ತಮಿಳುನಾಡು, ಕರಾವಳಿ ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಹೆಚ್ಚು ಭಾರೀ ಮಳೆ?: ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಕೆಲವು ದಿನಗಳ ಕಾಲ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಡಿಸೆಂಬರ್ 18ರಿಂದ ಡಿಸೆಂಬರ್ 19ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಅದರಲ್ಲೂ ಡಿಸೆಂಬರ್ 18 ರಿಂದ 20ರ ವರೆಗೆ ಆಂಧ್ರಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ಡಿಸೆಂಬರ್ 18ರಿಂದ 20ರ ವರೆಗೆ ತಮಿಳುನಾಡಿನ ಪುದುಚೇರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. 19 ಮತ್ತು 20 ರಂದು ಒಡಿಶಾದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಹೆಚ್ಚು ಚಳಿ?: ಡಿಸೆಂಬರ್ 18 ರಿಂದ ಡಿಸೆಂಬರ್ 21ರ ವರೆಗೆ ವಾಯುವ್ಯ ಭಾರತದ ಹಲವೆಡೆ ಶೀತದ ಪ್ರಮಾಣ ಹೆಚ್ಚಿರಲಿದೆ. ಡಿಸೆಂಬರ್ 22 ರಿಂದ ಡಿಸೆಂಬರ್ 23 ರವರೆಗೆ ಪಂಜಾಬ್ ಮತ್ತು ಹಿಮಾಚಲ ಪ್ರದೇಶ, ಡಿಸೆಂಬರ್ 19ರಿಂದ 22ರ ವರೆಗೆ ಪೂರ್ವ ರಾಜಸ್ಥಾನ ಮತ್ತು ಡಿಸೆಂಬರ್ 23ರ ವರೆಗೆ ಜಮ್ಮು-ಕಾಶ್ಮೀರ, ಪಶ್ಚಿಮ ರಾಜಸ್ಥಾನ ಮತ್ತು ಲಡಾಖ್‌ನಲ್ಲಿ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ದಟ್ಟ ಮಂಜು?: ಇಂದು (ಡಿಸೆಂಬರ್ 18) ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಡಿಸೆಂಬರ್ 18 ರಿಂದ ಡಿಸೆಂಬರ್ 20ರ ವರೆಗೆ ಅಸ್ಸಾಂ, ಡಿಸೆಂಬರ್ 19ರಿಂದ 22ರ ವರೆಗೆ ಮೇಘಾಲಯ ಮತ್ತು ಪೂರ್ವ ರಾಜಸ್ಥಾನ, ಡಿಸೆಂಬರ್ 18 ರಿಂದ 21ರ ವರೆಗೆ ಪಂಜಾಬ್ ಮತ್ತು ಹಿಮಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬಹುತೇಕ ಭಾಗಗಳಲ್ಲಿ ದಟ್ಟವಾದ ಮಂಜಿನ ಜೊತೆ ಹೊಗೆಯ ವಾತಾವರಣ ಇರಲಿದೆ. ಇದರ ಮಧ್ಯೆ ಈಗಾಗಲೇ ನವದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಟ್ರಾಫಿಕ್ ಪೊಲೀಸರು ವಾಹನಗಳ ಹೊಗೆ ತಪಾಸಣೆ ಮಾಡುವ ಕೆಲಸವನ್ನು ಮುಂದುವರೆಸಿದ್ದಾರೆ. ಇನ್ನು ಇಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ಪ್ರಮಾಣ 6 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications