Weather Forecast: ಈ ಭಾಗಗಳಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ

Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿಗಾಲದ ನಡುವೆಯೂ ದೇಶದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 4 ದಿನ ಈ ಭಾಗಗಳಲ್ಲಿ ಭಾರೀ ಮಳೆಯಾಗವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರವಡೀ ವಾಯುವ್ಯ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather Forecast Heavy rainfall forecast in these states Till December 25

ಡಿಸೆಂಬರ್ 21ರಂದು ಕರಾವಳಿ ಆಂಧ್ರಪ್ರದೇಶ, ಪುದುಚೇರಿ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ಭಾರೀ ಮಳೆ ಬೀಳಲಿದೆ. ಕರಾವಳಿ ಪಶ್ಚಿಮ ಬಂಗಾಳ ಮತ್ತು ಕರಾವಳಿ ಒಡಿಶಾ, ತ್ರಿಪುರ, ಮಣಿಪುರ, ಮಿಜೋರಾಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 25ರ ವರೆಗೆ ನಾಗಾಲ್ಯಾಂಡ್‌, ಮೇಘಾಲಯ ಮತ್ತು ಅಸ್ಸಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ವಾಯುವ್ಯ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ. ಡಿಸೆಂಬರ್ 21ರಿಂದ ಡಿಸೆಂಬರ್ 25ರವರೆಗೆ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಬಾಲ್ಟಿಸ್ತಾನ್, ಗಿಲ್ಗಿಟ್, ಮುಜಫರಾಬಾದ್ ಮತ್ತು ಲಡಾಖ್, ಡಸೆಂಬರ್ 22 ಮತ್ತು 23ರಂದು ಪಶ್ಚಿಮ ರಾಜಸ್ಥಾನ, ಡಿಸೆಂಬರ್ 22ರಂದು ಪಂಜಾಬ್, ಅದೇ ರೀತಿ ಇದೇ ವೇಳೆ ಚಂಡೀಗಢ ಮತ್ತು ಹರಿಯಾಣದಲ್ಲೂ ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಡಸೆಂಬರ್ 21 ಮತ್ತು 22ರಂದು ಹರಿಯಾಣ ಮತ್ತು ಚಂಡೀಗಢ, ಡಿಸೆಂಬರ್ 24ರಂದು ಉತ್ತರ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಇದೇ ವೇಳೆ ಜಾರ್ಖಂಡ್ ಮತ್ತು ಪೂರ್ವ ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಡಿಸೆಂಬರ್ 28ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಮದ ಪ್ರಮಾಣ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+