Weather Forecast: ಡಿಸೆಂಬರ್ 9ರ ವರೆಗೆ ಈ ಭಾಗಗಳಲ್ಲಿ ಮಳೆ ಮುನ್ಸೂಚನೆ
Weather Forecast: ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 9ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ (ಡಿಸೆಂಬರ್ 5) ಕರಾವಳಿ ಕರ್ನಾಟಕದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಬಿಹಾರ, ಕೋಲ್ಕತ್ತಾದ ಬಹುತೇಕ ಭಾಗಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯೂ ಸಹ ಈ ಭಾಗಗಳಲ್ಲಿ ಅದೇ ವಾತಾವರಣ ಇದೆ. ಇನ್ನು ಶುಕ್ರವಾರ (ಡಿಸೆಂಬರ್ 6) ಯಾವುದೇ ಮಳೆಯ ಮುನ್ಸೂಚನೆ ನೀಡಿಲ್ಲ. ಇನ್ನು ಕೆಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಳಪೆಯಾಗಿರಲಿದೆ ಎಂದು ತಿಳಿಸಿದೆ.

ಡಿಸೆಂಬರ್ 7ರ ರಾತ್ರಿಯಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಇನ್ನು ಡಿಸೆಂಬರ್ 8ರಿಂದ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಇದೇ ವಾತಾವರಣ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಡಿಸೆಂಬರ್ 7-9ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಜು ಹೆಚ್ಚಿರಲಿದ್ದು, ಗಾಳಿಯ ಗುಣಮಟ್ಟ ತೀವ್ರ ಕಳಪೆಯಾಗಿರಲಿದ ಅಂತಲೂ ತಿಳಿಸಿದೆ.
ಮುಂದಿನ ಒಂದೆರಡು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ತಾಪಮಾನ ಪ್ರಮಾಣ 2-4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ. ಗುಜರಾತ್‌ನಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ, ಮುಂದಿನ 4-5 ದಿನಗಳವರೆಗೆ ತಾಪಮಾನದಲ್ಲಿ ಸ್ವಲ್ಪ ವ್ಯತ್ಯಾಸಗಳಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಮತ್ತು ನಗರದ ಸುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಶ್ಮೀರದ ಹವಾಮಾನದ ವಿವರ: ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಡಿಸೆಂಬರ್ 5ರಿಂದ 7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 8ರಿಂದ 9ರ ವರೆಗೆ ಈ ಪ್ರದೇಶದಲ್ಲಿ ಹಿಮ ಹೆಚ್ಚಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 10ರಿಂದ 14ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ನವದೆಹಲಿಯ ಬಹುತೇಕ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಸಂಜೆ ಮತ್ತು ರಾತ್ರಿ ವೇಳೆ ಹೊಗೆಯ ಜೊತೆ ಮಂಜಿನ ವಾತಾವರಣ ನಿರ್ಮಾಣವಾಗಲಿದೆ. ಈಗಾಗಲೇ ಕಳೆದ ಮೂರು ದಿನಗಳಿಂದ ದೆಹಲಿಯ ನಿವಾಸಿಗಳು ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆ ವಾಹನ ಸವಾರರು ಹಾಗೂ ಇಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ.












Click it and Unblock the Notifications